ಪ್ರತಿ ಬಾರಿ ಪ್ರಧಾನಿ ಮೋದಿ ಮಾತನಾಡುವಾಗಲೆಲ್ಲಾ ಅದು ಸುಳ್ಳಿನ ಸುನಾಮಿಯಾಗಿರುತ್ತದೆ: ಜೈರಾಮ್ ರಮೇಶ್
ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಬಾರಿ ಮಾತನಾಡುವಾಗಲೂ ಅದು ಸುಳ್ಳಿನ ಸುನಾಮಿಯಾಗಿರುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ವಾಗ್ದಾಳಿ ನಡೆಸಿದರು. ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿಯವರು ಇತ್ತೀಚೆಗೆ ಮಾಡಿದ ಭಾಷಣವನ್ನು ಉಲ್ಲೇಖಿಸಿ ಟೀಕಿಸಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಬಾರಿ ಮಾತನಾಡುವಾಗಲೂ ಅದು ಸುಳ್ಳಿನ ಸುನಾಮಿಯಾಗಿರುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ವಾಗ್ದಾಳಿ ನಡೆಸಿದರು.
ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿಯವರು ಇತ್ತೀಚೆಗೆ ಮಾಡಿದ ಭಾಷಣವನ್ನು ಉಲ್ಲೇಖಿಸಿ ಟೀಕಿಸಿದರು.
'ಪ್ರಧಾನಿ ಮೋದಿ ಮಾತನಾಡುವಾಗಲೆಲ್ಲಾ ಅದು ನಿಂದನೆಯ ಸುರಿಮಳೆ, ಸುಳ್ಳಿನ ಸುನಾಮಿಯಾಗಿರುತ್ತದೆ. ಸಂಸತ್ತಿನಲ್ಲಿ ಅವರ ಇತ್ತೀಚಿನ ಭಾಷಣವು ಕ್ಲಿನಿಕಲ್ ಮನಶ್ಶಾಸ್ತ್ರಜ್ಞರಾಗಿ ತರಬೇತಿ ಪಡೆದ ಭಾರತದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರಾದ ಆಶಿಸ್ ನಂದಿ ಅವರು 2002ರ ಆರಂಭದಲ್ಲಿ ಸೆಮಿನಾರ್ ಮ್ಯಾಗಜೀನ್‌ನಲ್ಲಿ ಬರೆದದ್ದನ್ನು ನೆನಪಿಸಿಕೊಳ್ಳುವಂತೆ ಮಾಡಿತು' ಎಂದು ಟ್ವೀಟ್ ಮಾಡಿದ್ದಾರೆ.
ನಂದಿ ಅವರು ಬರೆದ ಲೇಖನದ ಆಯ್ದ ಭಾಗವನ್ನು ಸಹ ಅವರು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ನರೇಂದ್ರ ಮೋದಿಯವರನ್ನು 'ಕ್ಲಾಸಿಕ್, ಕ್ಲಿನಿಕಲ್ ಕೇಸ್ ಆಫ್ ಎ ಫ್ಯಾಸಿಸ್ಟ್' ಎಂದು ಕರೆದಿದ್ದಾರೆ.
ಅವಿಶ್ವಾಸ ನಿರ್ಣಯಕ್ಕೆ ಉತ್ತರ ನೀಡುವಾಗ ಪ್ರಧಾನಮಂತ್ರಿಗಳು ವಿರೋಧ ಪಕ್ಷಗಳ ಒಕ್ಕೂಟವಾದ INDIA ಅನ್ನು 'ಘಮಾಂಡಿಯಾ ಘಟಬಂಧನ್' (ಅಹಂಕಾರಗಳ ಮೈತ್ರಿ) ಎಂದು ಕರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


