ಕೆಂಪುಕೋಟೆಯಿಂದ ಮಾಡುವ ಈ ಬಾರಿಯ ಸ್ವಾತಂತ್ರೋತ್ಸವ ಭಾಷಣವೇ ಪ್ರಧಾನಿ ಮೋದಿಯ ಕೊನೆಯ ಭಾಷಣ: ಮಮತಾ ಬ್ಯಾನರ್ಜಿ
ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಮಾಡಲಿರುವ ಈ ವರ್ಷದ ಸ್ವಾತಂತ್ರೋತ್ಸವದ ಭಾಷಣವೇ ಅವರ ಕೊನೆಯ ಭಾಷಣವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರತಿಪಾದಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಮಾಡಲಿರುವ ಈ ವರ್ಷದ ಸ್ವಾತಂತ್ರೋತ್ಸವದ ಭಾಷಣವೇ ಅವರ ಕೊನೆಯ ಭಾಷಣವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರತಿಪಾದಿಸಿದ್ದಾರೆ.
ಬೆಹಾಲಾದಲ್ಲಿ ಟಿಎಂಸಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ಯಾನರ್ಜಿ, "ಖೇಲಾ ಹೋಬೆ (ನಾವು ಆಡುತ್ತೇವೆ)" ಎಂದು ಹೇಳುವ ಮೂಲಕ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಬಿಜೆಪಿಯಿಂದ ಅಧಿಕಾರ ಕಸಿದುಕೊಳ್ಳಲಿದೆ ಎಂದರು.
ಖೇಲಾ ಹೋಬ್ ಎಂಬುದು 2021 ರ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಆಡಳಿತಾರೂಢ ಟಿಎಂಸಿ ರೂಪಿಸಿದ ಘೋಷಣೆಯಾಗಿದೆ. ಮಂಗಳವಾರ ಕೆಂಪು ಕೋಟೆಯಿಂದ ಮಾಡುವ ಭಾಷಣವೇ ಪ್ರಧಾನಿ ಮೋದಿ ಅವರ ಕೊನೆಯ ಭಾಷಣವಾಗಲಿದೆಎಂದು ಬ್ಯಾನರ್ಜಿ ಹೇಳಿದರು.
2024 ರ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸದಸ್ಯತ್ವ ಹೊಂದಿರುವ ಇಂಡಿಯಾ ಮೈತ್ರಿಕೂಟ ಗೆಲ್ಲುವ ವಿಶ್ವಾಸವಿದೆ. ಈ ಬಣ ದೇಶಾದ್ಯಂತ ಬಿಜೆಪಿಯನ್ನು ನಿರ್ನಾಮ ಮಾಡುತ್ತದೆ. ಬಂಗಾಳದಲ್ಲಿ ಟಿಎಂಸಿ ಕೇಸರಿ ಪಕ್ಷವನ್ನು ನಿರ್ಣಾಯಕವಾಗಿ ಸೋಲಿಸುತ್ತದೆ ಎಂದರು.
ತಾನು ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಗಳನ್ನು ಹೊಂದಿಲ್ಲ ಎಂದು ಸೂಚಿಸಿದ ಮಮತಾ, ಬಂಗಾಳವು ರಾಜಕೀಯ ಸ್ಥಾನ ಬಯಸುವುದಿಲ್ಲ, ಅದು ಬಿಜೆಪಿ ಸರ್ಕಾರವನ್ನು ಹೊರಹಾಕಲು ಬಯಸುತ್ತದೆ. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳ ಸರಮಾಲೆಯೇ ಇರುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


