ದೇಶ

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದರೆ ಪ್ರಿಯಾಂಕಾ ಗೆಲುವು ಖಚಿತ: ಸಂಜಯ್ ರಾವುತ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್ ಪ್ರತಿಪಾದಿಸಿದ್ದಾರೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದರೆ ಪ್ರಿಯಾಂಕಾ ಗೆಲುವು ಖಚಿತ: ಸಂಜಯ್ ರಾವುತ್
Priyanka Gandhi and narendra modi
Published On :

ಮುಂಬಯಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್  ಪ್ರತಿಪಾದಿಸಿದ್ದಾರೆ.

ವಾರಣಾಸಿಯವರಿಗೆ ಪ್ರಿಯಾಂಕಾ ಗಾಂಧಿ ಬೇಕು. ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ. ವಾರಣಾಸಿಯವರಿಗೆ ಪ್ರಿಯಾಂಕಾ ಗಾಂಧಿ ಬೇಕು. ರಾಯ್‌ಬರೇಲಿ, ವಾರಣಾಸಿ ಮತ್ತು ಅಮೇಠಿ ಹೋರಾಟ ಬಿಜೆಪಿಗೆ ಕಠಿಣವಾಗಿದೆ ಎಂದು ರಾವತ್ ಹೇಳಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾದರೆ, ಶರದ್ ಪವಾರ್ ಮತ್ತು ಅಜಿತ್ ಪವಾರ್ ಏಕೆ ಭೇಟಿಯಾಗಬಾರದು ಎಂದು ಅವರು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಇಬ್ಬರೂ ಉಪ ಮುಖ್ಯಮಂತ್ರಿಗಳು ಸದ್ಯ ಅಸ್ತಿತ್ವದಲ್ಲಿರುವ ಸರ್ಕಾರದಿಂದ ಸಂತೋಷವಾಗಿಲ್ಲ,  'ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಅಜಿತ್ ಪವಾರ್, ದೇವೇಂದ್ರ ಫಡ್ನವೀಸ್ ಮತ್ತು ಮಹಾರಾಷ್ಟ್ರದ ಜನರು ಪ್ರಸ್ತುತ ಸರ್ಕಾರದಿಂದ ಸಂತೋಷವಾಗಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.