ಭಾರತ- ಚೀನಾ ಮಿಲಿಟರಿ ಮಾತುಕತೆ: ಲಡಾಖ್ ನಲ್ಲಿ ಇತ್ಯರ್ಥವಾಗದ ಸಮಸ್ಯೆಗಳ ತ್ವರಿತ ಪರಿಹಾರ ಕುರಿತು ಚರ್ಚೆ
ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಉಳಿದಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಎರಡು ದಿನಗಳ ಮಿಲಿಟರಿ ಮಾತುಕತೆ ಮುಕ್ತಾಯವಾದ ನಂತರ ಉಭಯ ದೇಶಗಳು ಜಂಟಿ ಹೇಳಿಕೆಯಲ್ಲಿ ಈ ರೀತಿ ತಿಳಿಸಿವೆ.

ನವದೆಹಲಿ: ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಉಳಿದಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಎರಡು ದಿನಗಳ ಮಿಲಿಟರಿ ಮಾತುಕತೆ ಮುಕ್ತಾಯವಾದ ನಂತರ ಉಭಯ ದೇಶಗಳು ಜಂಟಿ ಹೇಳಿಕೆಯಲ್ಲಿ ಈ ರೀತಿ ತಿಳಿಸಿವೆ.
ಪಾಶ್ಚಿಮಾತ್ಯ ವಲಯದ ಎಲ್ ಎಸಿಯುದ್ದಕ್ಕೂ ಇತ್ಯರ್ಥವಾಗದ ಸಮಸ್ಯೆಗಳ ಪರಿಹಾರದ ಕುರಿತು ಉಭಯ ದೇಶಗಳು ಧನಾತ್ಮಕ, ರಚನಾತ್ಮಕ ಮತ್ತು ಆಳವಾದ ಚರ್ಚೆಯನ್ನು ನಡೆಸಿರುವುದಾಗಿ ಮಾಹಿತಿ ನೀಡಿವೆ. ನಾಯಕತ್ವವು ಒದಗಿಸಿದ ಮಾರ್ಗದರ್ಶನಕ್ಕೆ ಅನುಗುಣವಾಗಿ ಮುಕ್ತ ರೀತಿಯಲ್ಲಿ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಭಾರತ-ಚೀನಾ ಕಾರ್ಪ್ಸ್ ಕಮಾಂಡರ್ ಮಟ್ಟದ 19 ನೇ ಸುತ್ತಿನ ಸಭೆಯು ಆಗಸ್ಟ್ 13-14 ರಂದು ಭಾರತ ಗಡಿಯ ಚುಶುಲ್-ಮೊಲ್ಡೊ ನಲ್ಲಿ ನಡೆದಿದೆ. ದೀರ್ಘಾವಧಿಯ ಗಡಿರೇಖೆ ಕುರಿತು ಇದೇ ಮೊದಲ ಬಾರಿಗೆ ಎರಡು ದಿನಗಳ ಉನ್ನತ ಮಟ್ಟದ ಮಿಲಿಟರಿ ಮಾತುಕತೆ ಆಗಿದ್ದು, 'ಉಳಿದಿರುವ ಸಮಸ್ಯೆಗಳನ್ನು ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಬಗೆಹರಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ವ್ಯಾಪಕವಾದ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳ ನಂತರ ಉಭಯ ರಾಷ್ಟ್ರಗಳು ಹಲವಾರು ಪ್ರದೇಶಗಳಿಂದ ತಮ್ಮ ಸೇನೆಯನ್ನು ಹಿಂತೆಗೆದುಕೊಂಡಿದ್ದರೂ ಪೂರ್ವ ಲಡಾಖ್‌ನ ಕೆಲವು ಘರ್ಷಣೆಯ ಬಿಂದುಗಳಲ್ಲಿ ಭಾರತ ಮತ್ತು ಚೀನಾದ ಪಡೆಗಳು ಮೂರು ವರ್ಷಗಳ ಘರ್ಷಣೆಯಲ್ಲಿ ಸಿಲುಕಿಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


