ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯಸ್ಮರಣೆ: ಸದೈವ ಅಟಲ್ ಸ್ಮಾರಕಕ್ಕೆ ರಾಷ್ಟ್ರಪತಿ, ಪ್ರಧಾನಿ ಪುಷ್ಪನಮನ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತಿತರ ಗಣ್ಯರು ಬುಧವಾರ ಗೌರವ ನಮನ ಸಲ್ಲಿಸಿದರು.

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತಿತರ ಗಣ್ಯರು ಬುಧವಾರ ಗೌರವ ನಮನ ಸಲ್ಲಿಸಿದರು.
ವಾಜಪೇಯಿ ಸ್ಮಾರಕ ‘ಸದೈವ್’ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರು, ಪಕ್ಷದ ನಾಯಕರು ಭಾಗಿಯಾಗಿದ್ದರು.
ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಅಟಲ್ ಜಿ ಪುಣ್ಯತಿಥಿ ಹಿನ್ನೆಲೆಯಲ್ಲಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದೆ. ದೇಶ ಸೇವೆ ವಿಚಾರದಲ್ಲಿ ಅಟಲ್ ಜಿ ನಮಗೆಲ್ಲಾ ಸ್ಫೂರ್ತಿ. ಅವರು ಭಾರತದ ಪರಿವರ್ತನೆಗೆ ಶ್ರಮಿಸಿದ ಪ್ರವರ್ತಕ’ ಎಂದು ಹೇಳಿದ್ದಾರೆ.
ಬಿಜೆಪಿಯಿಂದ ಮೊದಲ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ವಾಜಪೇಯಿ ಅವರು ಪಕ್ಷದ ಸರ್ವತೋಮುಖ ಬೆಳವಣಿಗೆಗೆ ಕಾರಣಿಕರ್ತರಾಗಿದ್ದಾರೆ. ಆರು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರವನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುವಲ್ಲಿಯೂ ಅವರ ಕೊಡುಗೆ ಅಪಾರವಾಗಿದೆ. ದೇಶದ ಅಭಿವೃದ್ದಿಗೆ ಶ್ರಮಿಸಿದವರಲ್ಲಿ ವಾಜಪೇಯಿ ಕೂಡ ಒಬ್ಬರು. ಅವರ ಆಡಳಿತಾವಧಿಯಲ್ಲಿ ದೇಶದಲ್ಲಿ ಅನೇಕ ಸುಧಾರಣೆಗಳನ್ನು ತಂದಿದ್ದಾರೆ‘ ಎಂದು ತಿಳಿಸಿದ್ದಾರೆ.
ಭಾರತ ರತ್ನ ಪುರಸ್ಕೃತ ವಾಜಪೇಯಿ ಅವರು 1998–2004ರ ವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ವಾಜಪೇಯಿ ಅವರು ಆಗಸ್ಟ್ 16, 2018ರಂದು ವಿಧಿವಶರಾಗಿದ್ದರು. 2014ರಲ್ಲಿ ಅವರಿಗೆ ಭಾರತ ರತ್ನ ದೊರಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


