ಕೇಂದ್ರ ಸಚಿವ ಸ್ಥಾನದ ಆಫರ್ ಬಗ್ಗೆ ಸುಪ್ರಿಯಾ ಸುಳೆ ಹೇಳಿದ್ದೇನು ಅಂದರೆ...
ಎನ್ ಸಿಪಿ ನಾಯಕ ಶರದ್ ಪವಾರ್ ಅಥವಾ ಅವರ ಪುತ್ರಿ ಸುಪ್ರಿಯಾ ಸುಲೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎನ್ ಸಿಪಿ ನಾಯಕಿ ಸುಪ್ರಿಯಾ ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬೈ: ಎನ್ ಸಿಪಿ ನಾಯಕ ಶರದ್ ಪವಾರ್ ಅಥವಾ ಅವರ ಪುತ್ರಿ ಸುಪ್ರಿಯಾ ಸುಲೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎನ್ ಸಿಪಿ ನಾಯಕಿ ಸುಪ್ರಿಯಾ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಸಚಿವ ಸ್ಥಾನದ ಕುರಿತಾಗಿ ತಮಗೆ ಯಾರೂ ಅಂತಹ ಆಫರ್ ನೀಡಿಲ್ಲ ಎಂದು ಸುಪ್ರಿಯಾ ಸುಲೆ ಸ್ಪಷ್ಟನೆ ನೀಡಿದ್ದಾರೆ.
ಮಹಾರಾಷ್ಟ್ರ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ಅವರು ಸುಪ್ರಿಯಾ ಅಥವಾ ಅವರ ತಂದೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸುಪ್ರಿಯಾ, ಕಾಂಗ್ರೆಸ್ ಯಾಕಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಎಂದು ಹೇಳಿದ್ದಾರೆ.
ನಾನು ಕಾಂಗ್ರೆಸ್ ನ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಗೌರವ್ ಗೊಗೋಯ್ ಅವರೊಂದಿಗೆ ವೈಯಕ್ತಿಕವಾಗಿ ಸಂಪರ್ಕದಲ್ಲಿದ್ದೇನೆ ಆದರೆ ಅವರ ಮಹಾರಾಷ್ಟ್ರ ಘಟಕದ ನಾಯಕರೊಂದಿಗೆ ಸಂಪರ್ಕದಲ್ಲಿಲ್ಲ ಎಂದು ಸುಪ್ರಿಯಾ ಹೇಳಿದ್ದಾರೆ. ಇತ್ತೀಚೆಗಷ್ಟೇ ವಿಪಕ್ಷನಾಯಕ ವಿಜಯ್ ವಾಡೆತ್ತಿವಾರ್ ಅಜಿತ್ ಪವಾರ್ ಹಾಗೂ ಶರದ್ ಪವಾರ್ ಭೇಟಿ ಮಾಡಿದ್ದನ್ನು ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


