ಮಧ್ಯಪ್ರದೇಶ-ಛತ್ತೀಸ್‌ಗಢ ವಿಧಾನಸಭಾ ಚುನಾವಣೆ: ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!
ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ವರ್ಷ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಪಕ್ಷ ಸಿದ್ಧತೆಯಲ್ಲಿ ತೊಡಗಿದೆ.

ನವದೆಹಲಿ: ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ವರ್ಷ ಎರಡೂ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಪಕ್ಷ ಸಿದ್ಧತೆಯಲ್ಲಿ ತೊಡಗಿದೆ.
ಗುರುವಾರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಪಕ್ಷವು ಮಧ್ಯಪ್ರದೇಶದಲ್ಲಿ 39 ಮತ್ತು ಛತ್ತೀಸ್‌ಗಢದಲ್ಲಿ 21 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ವಾಸ್ತವವಾಗಿ, ಎರಡೂ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆ ಬುಧವಾರ ನಡೆಯಿತು. ಈ ಸಭೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಎಲ್ಲಾ ನಾಯಕರು ಭಾಗವಹಿಸಿದ್ದರು. ಉಭಯ ರಾಜ್ಯಗಳ ಚುನಾವಣೆಯ ಹೊರತಾಗಿ ಹಲವು ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಇದಾದ ನಂತರವೇ ಮೊದಲು ರಾಜಸ್ಥಾನದಲ್ಲಿ ಬಿಜೆಪಿಯ ಚುನಾವಣಾ ತಂಡವನ್ನು ಘೋಷಿಸಲಾಯಿತು. ನಂತರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
2018ರಲ್ಲಿ ನಡೆದ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ರಾಜ್ಯದ ಒಟ್ಟು 90 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 15 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಅದೇ ಸಮಯದಲ್ಲಿ, ಕಾಂಗ್ರೆಸ್ ಗರಿಷ್ಠ 68 ವಿಧಾನಸಭಾ ಸ್ಥಾನಗಳನ್ನು ಗೆದ್ದು ಸರ್ಕಾರವನ್ನು ರಚಿಸಿತು. ಇದೀಗ ಬಿಜೆಪಿ ಹಲವು ವಿಚಾರಗಳ ತಯಾರಿಯಲ್ಲಿ ನಿರತವಾಗಿದ್ದು, ತಾನು ಸೋತ ಸ್ಥಾನಗಳಿಗೆ ಕಾರಣ ಹುಡುಕುತ್ತಾ, ಮುಂದೆ ರಣತಂತ್ರ ರೂಪಿಸುತ್ತಿದೆ.
2018ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 114 ಸ್ಥಾನಗಳನ್ನು ಪಡೆದುಕೊಂಡಿತು. 230 ಸದಸ್ಯರ ವಿಧಾನಸಭೆಯಲ್ಲಿ ಬಹುಮತಕ್ಕೆ ಎರಡು ಸ್ಥಾನ ಕೊರತೆಯಿತ್ತು. ಇನ್ನು ಬಿಜೆಪಿ 109 ಸ್ಥಾನಗಳು ಪಡೆದಿತ್ತು. ಬಿಎಸ್‌ಪಿ ಎರಡು ಸ್ಥಾನ ಪಡೆದರೆ ಇತರರಿಗೆ ಐದು ಸ್ಥಾನಗಳು ಲಭಿಸಿತ್ತು. ನಂತರ ಬಿಎಸ್‌ಪಿ, ಎಸ್‌ಪಿ ಮತ್ತು ಇತರರ ಬೆಂಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಿತು. 15 ವರ್ಷಗಳ ನಂತರ ರಾಜ್ಯದಲ್ಲಿ ಅಧಿಕಾರವನ್ನು ಪಡೆದುಕೊಂಡಿತು. ಕಮಲ್ ನಾಥ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಸರ್ಕಾರ ಡಿಸೆಂಬರ್ 2018ರಿಂದ ಮಾರ್ಚ್ 2020ರವರೆಗೆ ನಡೆಯಿತು. ಆದರೆ 15 ತಿಂಗಳ ಅಂತ್ಯದ ವೇಳೆಗೆ, ಕಮಲ್ ನಾಥ್ ಸರ್ಕಾರದ ಪತನ ನಿರ್ಧಾರವಾಯಿತು. ಅನೇಕ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡರು. ಹೀಗಾಗಿ ಬಿಜೆಪಿ ಸರ್ಕಾರ ನಡೆದಿದ್ದು ಶಿವರಾಜ್ ಮುಖ್ಯಮಂತ್ರಿಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


