ದೇಶ

ಹಿಮಾಚಲ ಪ್ರದೇಶ ಪ್ರವಾಹ: 250ಕ್ಕೂ ಹೆಚ್ಚು ಜನರ ಸಾವಿನ ನಂತರ ಎಚ್ಚೆತ್ತ ಸರ್ಕಾರ, ರಸ್ತೆ ನಿರ್ಮಾಣ ನಿಯಮದಲ್ಲಿ ಬದಲಾವಣೆ

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 250ಕ್ಕೂ ಮಂದಿ ಸಾವನ್ನಪ್ಪಿದ್ದ ನಂತರ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನಿಯಮಗಳನ್ನು ರಸ್ತೆ ನಿರ್ಮಾಣದಲ್ಲಿ ನಿಯಮಗಳನ್ನು ಬದಲಾಯಿಸಿದ್ದಾರೆ. ರಾಜ್ಯದ ಎಲ್ಲಾ ರಸ್ತೆಗಳಿಗೆ ಸರಿಯಾದ ಒಳಚರಂಡಿ ಮತ್ತು ಅಡ್ಡ ಚರಂಡಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಪ್ರವಾಹ: 250ಕ್ಕೂ ಹೆಚ್ಚು ಜನರ ಸಾವಿನ ನಂತರ ಎಚ್ಚೆತ್ತ ಸರ್ಕಾರ, ರಸ್ತೆ ನಿರ್ಮಾಣ ನಿಯಮದಲ್ಲಿ ಬದಲಾವಣೆ
ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು
Published On :

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 250ಕ್ಕೂ ಮಂದಿ ಸಾವನ್ನಪ್ಪಿದ್ದ ನಂತರ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ರಸ್ತೆ ನಿರ್ಮಾಣದಲ್ಲಿ ನಿಯಮಗಳನ್ನು ಬದಲಾಯಿಸಿದ್ದಾರೆ. ರಾಜ್ಯದ ಎಲ್ಲಾ ರಸ್ತೆಗಳಿಗೆ ಸರಿಯಾದ ಒಳಚರಂಡಿ ಮತ್ತು ಅಡ್ಡ ಚರಂಡಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಇದನ್ನು ಪರಿಶೀಲಿಸಲು ಶೀಘ್ರದಲ್ಲಿಯೇ ಉನ್ನತ ಮಟ್ಟದ ಸಮಿತಿ ಮತ್ತು ಮೇಲ್ವಿಚಾರಣಾ ತಂಡಗಳನ್ನು ರಚಿಸಲಾಗುವುದು, ಸರಿಯಾದ ಚರಂಡಿ ಮತ್ತು ಅಡ್ಡ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಗಳಲ್ಲಿ ನೀರು ಹರಿದು ಬಿರುಕು ಕಾಣಿಸಿಕೊಂಡು ಅಪಾರ ಹಾನಿ ಉಂಟಾಗಿದೆ ಎಂದ ಅವರು, ಇನ್ನು ಮುಂದೆ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಹೊಸ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಲು ಜಿಲ್ಲೆಯ ನದಿ ತೀರದಲ್ಲಿ ಮಣ್ಣಿನ ಸವೆತ ಮತ್ತು ಭೂಕುಸಿತವನ್ನು ತಡೆಗೆ ವೈಜ್ಞಾನಿಕ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಪ್ರತಿಪಾದಿಸಿದ ಸುಖು, ಈ ನಿಟ್ಟಿನಲ್ಲಿ ದೀರ್ಘಾವಧಿಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮತ್ತು ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ ಎಂದಿದ್ದಾರೆ. 

 ಛತ್ತೀಸ್‌ಗಢ ಸರ್ಕಾರವು ವಿಪತ್ತು ಪರಿಹಾರ ನಿಧಿಗೆ 11 ಕೋಟಿ ರೂಪಾಯಿಗಳನ್ನು ಒದಗಿಸಿದೆ ಎಂದು ತಿಳಿಸಿದ ಮುಖ್ಯಮಂತ್ರಿ,  ಭೂಪೇಶ್ ಬಘೇಲ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಈ ವಿಪತ್ತಿನ ಸಮಯದಲ್ಲಿ ವಿಪತ್ತು ಪೀಡಿತ ಕುಟುಂಬಗಳಿಗೆ ಪರಿಹಾರವನ್ನು ಒದಗಿಸುವಲ್ಲಿ ನೆರವು ಗಣನೀಯವಾಗಿ ಪರಿಣಾಮ ಬೀರುತ್ತದೆ.  ಅತಿವೃಷ್ಟಿಯಿಂದ ರಾಜ್ಯದಲ್ಲಿ 10 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ದೊಡ್ಡ ಪ್ರಮಾಣದಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಕೈಗೊಂಡಿದೆ ಮತ್ತು ಸಂತ್ರಸ್ತ ಜನರಿಗೆ ಪರಿಹಾರ ನೀಡಲು ಬದ್ಧವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.