ಸೇನಾ ಟ್ರಕ್ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ
ಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ 9 ಯೋಧರು ಹುತಾತ್ಮರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಲಡಾಕ್: ಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ 9 ಯೋಧರು ಹುತಾತ್ಮರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಲೇಹ್ ಬಳಿ ನಡೆದ ದುರ್ಘಟನೆಯಲ್ಲಿ ನಾವು ನಮ್ಮ ಭಾರತೀಯ ಸೇನೆಯ ಸಿಬ್ಬಂದಿಗಳನ್ನು ಕಳೆದುಕೊಂಡಿದ್ದೇವೆ ಎಂದು ಹೇಳಲು ನೋವಾಗುತ್ತಿದೆ. ದೇಶಕ್ಕೆ ಅವರು ನೀಡಿರುವ ಉತ್ಕೃಷ್ಟ ಸೇವೆ ಸದಾ ಸ್ಮರಣೀಯ. ಮೃತ ಕುಟುಂಬಗಳಿಗೆ ಸಂತಾಪಗಳು ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ.
ಲೇಹ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನಾ ಸಿಬ್ಬಂದಿಯ ಜೀವ ಕಳೆದುಕೊಂಡಿರುವ ವಿಚಾರ ತಿಳಿದು ತೀವ್ರ ದುಃಖವಾಯಿತು. ಮೃತರ ಕುಟುಂಬಗಳಿಗೆ ಸಂತಾಪವನ್ನು ತಿಳಿಸುತ್ತೇನೆ. ದೇವರು ಅವರಿಗೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಗಾಯಗೊಂಡವರು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


