ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ವೇಳೆ ತೆಗೆದ ಚಿತ್ರಗಳನ್ನು ಬಿಡುಗಡೆ ಮಾಡಿದ ಇಸ್ರೋ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯು ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸುವ ಕೆಲವೇ ನಿಮಿಷಗಳ ಮುನ್ನ ತೆಗೆದ ಚಿತ್ರಗಳನ್ನು ಬುಧವಾರ ಬಿಡುಗಡೆ ಮಾಡಿದೆ.

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯು ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸುವ ಕೆಲವೇ ನಿಮಿಷಗಳ ಮುನ್ನ ತೆಗೆದ ಚಿತ್ರಗಳನ್ನು ಬುಧವಾರ ಬಿಡುಗಡೆ ಮಾಡಿದೆ.
ಚಂದ್ರಯಾನ-3 ರ ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾದಿಂದ ಲ್ಯಾಂಡಿಂಗ್ ವೇಳೆ ತೆಗೆದ ಚಂದ್ರನ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.
CH-3 ಲ್ಯಾಂಡರ್ ಮತ್ತು ಬೆಂಗಳೂರಿನ MOX-ISTRAC ನಡುವೆ ಸಂವಹನ ಸಂಪರ್ಕ ಸಾಧಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಇದನ್ನು ಓದಿ: ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿ: "ಈ ಕ್ಷಣ ಅಭೂತಪೂರ್ವ, ಐತಿಹಾಸಿಕ" ಎಂದ ಪ್ರಧಾನಿ ಮೋದಿ
ಚಂದ್ರಯಾನ 3 ಮಿಷನ್‌ನಲ್ಲಿ ದ್ವಿಮುಖ ಸಂವಹನ ಸೌಲಭ್ಯವಿದೆ. ಒಂದು ಚಂದ್ರಯಾನ 2 ಆರ್ಬಿಟರ್‌ನೊಂದಿಗೆ, ಎರಡನೆಯದು ನೇರವಾಗಿ ಇಸ್ರೋ ಕಮಾಂಡ್ ಸೆಂಟರ್‌ನೊಂದಿಗೆ ಸಂಪರ್ಕ ಹೊಂದಿದೆ.
ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯನ್ನು ಸ್ಪರ್ಶಿಸಿದ ನಂತರ ವಿಕ್ರಮ್ ಲ್ಯಾಂಡರ್ ಹಂಚಿಕೊಂಡ ಮೊದಲ ಚಿತ್ರ ಇದಾಗಿದೆ.
Chandrayaan-3 Mission:
The image captured by the
Landing Imager Camera
after the landing.
It shows a portion of Chandrayaan-3's landing site. Seen also is a leg and its accompanying shadow.
Chandrayaan-3 chose a relatively flat region on the lunar surface
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


