ದೇಶ

ದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅಧಿಕೃತ ನಿವಾಸದ ಗೋಡೆಗೆ ಕ್ಯಾಬ್ ಡಿಕ್ಕಿ!

ದೆಹಲಿಯಲ್ಲಿರುವ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರ ಅಧಿಕೃತ ನಿವಾಸದ ಗೋಡೆಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ಯಾಕ್ಸಿಯೊಂದು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅಧಿಕೃತ ನಿವಾಸದ ಗೋಡೆಗೆ ಕ್ಯಾಬ್ ಡಿಕ್ಕಿ!
ಕೇಂದ್ರ ಸಚಿವ ಕಿರಣ್ ರಿಜಿಜು ನಿವಾಸದ ಗೋಡೆಕೆ ಕ್ಯಾಬ್ ಡಿಕ್ಕಿ
Published On :

ನವದೆಹಲಿ: ದೆಹಲಿಯಲ್ಲಿರುವ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರ ಅಧಿಕೃತ ನಿವಾಸದ ಗೋಡೆಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ಯಾಕ್ಸಿಯೊಂದು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಗೋಡೆಯ ಒಂದು ಭಾಗವು ಮುರಿದು ಬಿದ್ದಿದೆ ಮತ್ತು ರಂಧ್ರ ಉಂಟಾಗಿದೆ.

'ಚಾಲಕನನ್ನು ರಹೀಮ್ ಖಾನ್ ಎಂದು ಗುರುತಿಸಲಾಗಿದ್ದು, ಮೊದಲಿಗೆ ಡಿಟಿಸಿ ಬಸ್‌ಗೆ ಡಿಕ್ಕಿ ಹೊಡೆದ ನಂತರ ಕ್ಯಾಬ್‌ನ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ನಂತರ ಕೃಷ್ಣ ಮೆನನ್ ಮಾರ್ಗದಲ್ಲಿರುವ ಕಿರಣ್ ರಿಜಿಜು ಅವರ ಅಧಿಕೃತ ನಿವಾಸದ ಗೋಡೆಗೆ ಬುಧವಾರ ಡಿಕ್ಕಿ ಹೊಡೆದಿದೆ' ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ. 

Story image

ಘಟನೆ ನಂತರ ಹರಿಯಾಣದ ನುಹ್ ಮೂಲದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ವಿಚಾರಣೆ ವೇಳೆ ರಹೀಮ್ ಖಾನ್, ತನ್ನ ಕ್ಯಾಬ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ನಂತರ ನಿಯಂತ್ರಣ ಕಳೆದುಕೊಂಡು ಕೇಂದ್ರ ಸಚಿವರ ನಿವಾಸದ ಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ವಿವರಿಸಿದ್ದಾನೆ. ನಂತರ ಆತನನ್ನು ಬಿಡುಗಡೆ ಮಾಡಲಾಗಿದೆ.

ರಹೀಮ್ ಖಾನ್ ತನ್ನ ಕುಟುಂಬದೊಂದಿಗೆ ನುಹ್‌ಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ವಿಚಾರಣೆಯ ನಂತರ ಆತನನ್ನು ಬಿಡುಗಡೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.