ದೇಶ

ಇಸ್ರೋ ನೆರವು ಕೇಳಿದ ಪಶ್ಚಿಮ ಬಂಗಾಳ ರಾಜ್ಯಪಾಲರು

ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಇಸ್ರೋ ನೆರವು ಕೋರಿದ್ದಾರೆ.

ಇಸ್ರೋ ನೆರವು ಕೇಳಿದ ಪಶ್ಚಿಮ ಬಂಗಾಳ ರಾಜ್ಯಪಾಲರು
ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ್ ಬೋಸ್
Published On :

ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಇಸ್ರೋ ನೆರವು ಕೋರಿದ್ದಾರೆ. ಕಾಲೇಜು ಹಾಗು ವಿವಿ ಕ್ಯಾಂಪಸ್ ಗಳಲ್ಲಿ ರ್ಯಾಗಿಂಗ್ ನ್ನು ತಡೆಗಟ್ಟುವುದಕ್ಕಾಗಿ ತಂತ್ರಜ್ಞಾನ ಪರಿಹಾರವನ್ನು ಕಂಡುಕೊಳ್ಳಲು ರಾಜ್ಯಪಾಲರು ಇಸ್ರೋ ನೆರವು ಕೇಳಿದ್ದಾರೆ ಎಂದು ರಾಜಭವನ ತಿಳಿಸಿದೆ. 

ಜಾದವ್ ಪುರ ವಿವಿಯಲ್ಲಿನ ಹಾಸ್ಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ರ್ಯಾಗಿಂಗ್ ಪರಿಣಾಮ ಓರ್ವ ಪದವಿ  ವಿದ್ಯಾರ್ಥಿ ಸಾವನ್ನಪ್ಪಿದ್ದು ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. 

ವಿಶ್ವವಿದ್ಯಾನಿಲಯ ಕ್ಯಾಂಪಸ್‌ಗಳಲ್ಲಿ ರ್ಯಾಗಿಂಗ್‌ನ ಪಿಡುಗನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ತೊಡೆದುಹಾಕಲು ಸೂಕ್ತವಾದ ತಂತ್ರಜ್ಞಾನವನ್ನು ಗುರುತಿಸುವುದಕ್ಕಾಗಿ ಪಶ್ಚಿಮ ಬಂಗಾಳದ ವಿವಿಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರಾದ ಸಿವಿ ಆನಂದ್ ಬೋಸ್, ಇಸ್ರೋ ಅಧ್ಯಕ್ಷರನ್ನು ಸಂಪರ್ಕಿಸಿದ್ದಾರೆ”ಎಂದು ರಾಜಭವನದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬೋಸ್ ಅವರು ಹೈದರಾಬಾದ್ ಮೂಲದ ಸಂಸ್ಥೆಯೊಂದರೊಂದಿಗೂ ಈ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. "ಅವರು ವಿಡಿಯೋ ಅನಾಲಿಟಿಕ್ಸ್, ಇಮೇಜ್ ಮ್ಯಾಚಿಂಗ್ ಸ್ವಯಂಚಾಲಿತ ಗುರಿ ಗುರುತಿಸುವಿಕೆ ಮತ್ತು ರಿಮೋಟ್ ಸೆನ್ಸಿಂಗ್‌ನಂತಹ ಬಹು ಮೂಲಗಳನ್ನು ಬಳಸಿಕೊಂಡು ಸೂಕ್ತವಾದ ತಂತ್ರಜ್ಞಾನ ಪರಿಹಾರವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುತ್ತಿದ್ದಾರೆ" ಎಂದು ರಾಜಭವನ ನೀಡಿರುವ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.