ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕೇ?: ಪಂಜಾಬ್ ಸಿಎಂಗೆ ರಾಜ್ಯಪಾಲರ ಬಹಿರಂಗ ಎಚ್ಚರಿಕೆ
ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಮತ್ತು ಮುಖ್ಯಮಂತ್ರಿ ಭಗವಂತ್ ಮಾನ್ ನಡುವಿನ ಜಗಳ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಪತ್ರಗಳಿಗೆ ಉತ್ತರಿಸದಿದ್ದರೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವುದಾಗಿ...

ಚಂಡೀಗಢ: ಪಂಜಾಬ್ ಗವರ್ನರ್ ಬನ್ವಾರಿಲಾಲ್ ಪುರೋಹಿತ್ ಮತ್ತು ಮುಖ್ಯಮಂತ್ರಿ ಭಗವಂತ್ ಮಾನ್ ನಡುವಿನ ಜಗಳ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಪತ್ರಗಳಿಗೆ ಉತ್ತರಿಸದಿದ್ದರೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವುದಾಗಿ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ರಾಜ್ಯಪಾಲರು ಶುಕ್ರವಾರ ಸಿಎಂಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಮಾನ್‌ಗೆ ಇತ್ತೀಚಿಗೆ ಬರೆದ ಪತ್ರದಲ್ಲಿ, ರಾಜ್ಯಪಾಲ ಪುರೋಹಿತ್ ಅವರು ಈ ಹಿಂದಿನ ತಮ್ಮ ಪತ್ರಗಳಿಗೆ ಯಾವುದೇ ಉತ್ತರ ನೀಡದ ಸಿಎಂ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದು, ಸಾಂವಿಧಾನಿಕ ಕಾರ್ಯವಿಧಾನದ ವೈಫಲ್ಯದ ಬಗ್ಗೆ ರಾಷ್ಟ್ರಪತಿಗಳಿಗೆ ವರದಿ ನೀಡುವುದಾಗಿ ಎಚ್ಚರಿಸಿದ್ದಾರೆ.
ಸಂವಿಧಾನದ 356 ನೇ ವಿಧಿ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ರ ಅಡಿಯಲ್ಲಿ ಈ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಕ್ರಮ ಕೈಗೊಳ್ಳುವಂತೆ ಪುರೋಹಿತ್ ಅವರು ಸಿಎಂ ಮಾನ್ ಅವರಿಗೆ ಸಲಹೆ ನೀಡಿದ್ದಾರೆ.
“ನನ್ನ ಪತ್ರಗಳಿಗೆ ಅಗತ್ಯ ಮಾಹಿತಿಗಳನ್ನು ಕೋರಲಾಗಿದೆ, ಹಾಗೆಯೇ ರಾಜ್ಯದಲ್ಲಿನ ಡ್ರಗ್ಸ್ ಸಮಸ್ಯೆಗೆ ಸಂಬಂಧಿಸಿದಂತೆ ನೀವು ತೆಗೆದುಕೊಂಡ ಕ್ರಮಗಳ ವಿಷಯದಲ್ಲೂ ಸಹ ವಿಫಲವಾದಲ್ಲಿ ಕಾನೂನು ಮತ್ತು ಸಂವಿಧಾನದ ಪ್ರಕಾರ ಕ್ರಮ ಕೈಗೊಳ್ಳುವುದನ್ನು ಬಿಟ್ಟು ನನಗೆ ಬೇರೆ ಆಯ್ಕೆಯಿಲ್ಲ ಎಂದು ರಾಜ್ಯಪಾಲರು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯಪಾಲರ ಪತ್ರವನ್ನು ಶುಕ್ರವಾರ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


