ಶೋಭಾ ಯಾತ್ರೆಗೂ ಮುನ್ನ ಕೋಮು ಗಲಭೆ ಪೀಡಿತ ನುಹ್ ನಲ್ಲಿ ಅಂತರ್ಜಾಲ ಸಂಪರ್ಕ ಕಡಿತ, ಸೆಕ್ಷನ್ 144 ಜಾರಿ
ಹರ್ಯಾಣ ಸರ್ಕಾರ ಗಲಭೆ ಪೀಡಿತ ನುಹ್ ನಲ್ಲಿ ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದ್ದು ಸೆಕ್ಷನ್ 144 ಜಾರಿಗೊಳಿಸಿದೆ.

ಚಂಡೀಗಢ: ಹರ್ಯಾಣ ಸರ್ಕಾರ ಗಲಭೆ ಪೀಡಿತ ನುಹ್ ನಲ್ಲಿ ಅಂತರ್ಜಾಲ ಸಂಪರ್ಕ ಕಡಿತಗೊಳಿಸಲಾಗಿದ್ದು ಸೆಕ್ಷನ್ 144 ಜಾರಿಗೊಳಿಸಿದೆ.
ಶೋಭಾ ಯಾತ್ರೆಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಆ.28 ವರೆಗೆ ಮೊಬೈಲ್ ಇಂಟರ್ ನೆಟ್ ಸೇವೆಗಳು, ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸೋಮವಾರದಂದು ರ್ಯಾಲಿ ನಡೆಯಲಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹಬ್ಬುವುದನ್ನು ತಡೆಗಟ್ಟಲು ಹರ್ಯಾಣ ಸರ್ಕಾರ ಈ ಕ್ರಮ ಕೈಗೊಂಡಿದೆ.
ಜುಲೈನಲ್ಲಿ ಕೋಮುಗಲಭೆಯ ನಂತರ ನಂತರ ಆಗಸ್ಟ್ 28 ರಂದು ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆ ನಡೆಸಲು ನುಹ್ ಅಧಿಕಾರಿಗಳು ಇತ್ತೀಚೆಗೆ ಅನುಮತಿ ನಿರಾಕರಿಸಿದ್ದರು.
ಜಿಲ್ಲಾಡಳಿತವು ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಿದೆ, ಮುನ್ನೆಚ್ಚರಿಕೆ ಕ್ರಮವಾಗಿ ಒಂದು ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿದೆ.
ಆ.26 ರಿಂದ 28 ವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ವ್ಯಕ್ತಿಗಳು ಪರವಾನಗಿ ಪಡೆದ ಬಂದೂಕುಗಳು, ಲಾಠಿಗಳು, ಕೊಡಲಿಗಳು ಮತ್ತು ಇತರ ಆಯುಧಗಳನ್ನು ಸಾಗಿಸಲು ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


