ಮಧುರೈ ರೈಲಿನಲ್ಲಿ ಬೆಂಕಿ ಅವಘಡ: ರೈಲ್ವೆ ಸುರಕ್ಷತಾ ಆಯುಕ್ತರಿಂದ ತನಿಖೆ
ಮಧುರೈನಲ್ಲಿ ಶನಿವಾರ ರೈಲ್ವೆ ಕೋಚ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಕಾನೂನುಬದ್ಧ ತನಿಖೆ ನಡೆಸುವುದಾಗಿ ದಕ್ಷಿಣ ರೈಲ್ವೆ ಪ್ರಕಟಿಸಿದೆ.

ಚೆನ್ನೈ: ಮಧುರೈನಲ್ಲಿ ಶನಿವಾರ ರೈಲ್ವೆ ಕೋಚ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಆಗಸ್ಟ್ 27 ರಂದು ಕಾನೂನುಬದ್ಧ ತನಿಖೆ ನಡೆಸುವುದಾಗಿ ದಕ್ಷಿಣ ರೈಲ್ವೆ ಪ್ರಕಟಿಸಿದೆ.
ಬೆಂಗಳೂರಿನ ದಕ್ಷಿಣ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತ ಎ ಎಂ ಚೌಧರಿ ಅವರು ಭಾನುವಾರ ಮಧುರೈನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿ ಸಂಕೀರ್ಣದಲ್ಲಿರುವ ಡಿಆರ್‌ಎಂ ಸಮ್ಮೇಳನ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ.
"ಘಟನೆಯ ಬಗ್ಗೆ ಮಾಹಿತಿ ಹೊಂದಿರುವ ಮತ್ತು ಸಾಕ್ಷ್ಯ ನೀಡಲು ಬಯಸುವ ಯಾವುದೇ ಸಾರ್ವಜನಿಕರು ಮಧುರೈ ಆಗಮಿಸಿ ಚೌಧರಿ ಅವರಿಗೆ ಮಾಹಿತಿ ನೀಡಬಹುದು ಅಥವಾ ದಕ್ಷಿಣ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತರಿಗೆ ಪತ್ರ ಬರೆಯಬಹುದು" ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಇಂದು ಬೆಳಗಿನ ಜಾವ ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ 10 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


