ದೇಶ

ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ‘ಖಾಲಿಸ್ತಾನ್‌ ಜಿಂದಾಬಾದ್’ ಬರಹ, ಪೊಲೀಸರಿಂದ ತನಿಖೆ

ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ಖಲಿಸ್ತಾನ ಪರ ಗೋಡೆ ಬರಹಗಳು ಕಾಣಿಸಿಕೊಂಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ‘ಖಾಲಿಸ್ತಾನ್‌ ಜಿಂದಾಬಾದ್’ ಬರಹ, ಪೊಲೀಸರಿಂದ ತನಿಖೆ
ಖಾಲಿಸ್ತಾನ್‌ ಜಿಂದಾಬಾದ್
Published On :

ನವದೆಹಲಿ: ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ಖಲಿಸ್ತಾನ ಪರ ಗೋಡೆ ಬರಹಗಳು ಕಾಣಿಸಿಕೊಂಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ದೆಹಲಿಯ 5ಕ್ಕೂ ಹೆಚ್ಚು ಮೆಟ್ರೊ ನಿಲ್ದಾಣಗಳ ಗೋಡೆಗಳ ಮೇಲೆ ಕಿಡಿಗೇಡಿಗಳು ‘ದೆಹಲಿ ಬನೇಗಾ ಖಾಲಿಸ್ತಾನ್ ಮತ್ತು ಖಾಲಿಸ್ತಾನ್ ಜಿಂದಾಬಾದ್’ ಎಂಬ ಬರಹಗಳನ್ನು ಬರೆದಿದ್ದಾರೆ. ಈ ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

ಜಿ20 ಮೇಲೆ ಕರಿನೆರಳು
ಮುಂದಿನ ತಿಂಗಳು ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯಲಿದ್ದು, ಇದರ ಬೆನ್ನಲ್ಲೇ ಕಿಡಿಗೇಡಿಗಳ ಈ ಕೃತ್ಯ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಇಡೀ ದೇಶವೇ ಜಿ20 ಶೃಂಗಸಭೆಗೆ ಅತಿಥ್ಯ ವಹಿಸುತ್ತಿದೆ. ಆದರೆ ಅತಿಥಿಗಳು ದೆಹಲಿಗೆ ಆಗಮಿಸುತ್ತಾರೆ. ಜಿ20 ಶೃಂಗಸಭೆ ಯಶಸ್ವಿಗೊಳಿಸಲು ದೆಹಲಿ ನಿವಾಸಿಗಳ ಮೇಲೆ ವಿಶೇಷ ಜವಾಬ್ದಾರಿ ಇದೆ. ರಾಷ್ಟ್ರದ ಘನತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಜಿ-20 ಶೃಂಗಸಭೆ ಸೆ. 9 ಹಾಗೂ 10ರಂದು ನಡೆಯಲಿದೆ. 40ಕ್ಕೂ ಹೆಚ್ಚು ದೇಶಗಳ ನಾಯಕರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, ಆಯ್ದ ದೇಶಗಳ ಅತಿಥಿಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.