ಬಿಜೆಪಿ ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್ ಬುಕ್: ಮಮತಾ ಬ್ಯಾನರ್ಜಿ
ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಕೋಲ್ಕತ್ತಾ: ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.
ಟಿಎಂಸಿ ಯುವ ಘಟಕದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ರಾಷ್ಟ್ರವು ನಿರಂಕುಶ ಆಡಳಿತವನ್ನು ಎದುರಿಸುವುದನ್ನು ಖಚಿತಪಡಿಸುತ್ತದೆ ಎಂದು ಎಚ್ಚರಿಸಿದರು.
"ಸತತ ಮೂರನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಡಿಸೆಂಬರ್ 2023 ರಲ್ಲಿ ಲೋಕಸಭೆ ಚುನಾವಣೆಯನ್ನು ಬಿಜೆಪಿ ನಡೆಸಬಹುದು, ಕೇಸರಿ ಪಕ್ಷವು ಈಗಾಗಲೇ ಸಮುದಾಯಗಳ ನಡುವಿನ ದ್ವೇಷದ ಘರ್ಷಣೆ ರಾಷ್ಟ್ರವಾಗಿ ಮಾಡಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡುತ್ತಾರೆ ಎಂದು ಮಮತಾ ಆರೋಪಿಸಿದರು.
ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲಾ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ, ಆದ್ದರಿಂದ ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸುವಂತಿಲ್ಲ ಎಂದ ಅವರು, ಬಂಗಾಳದಲ್ಲಿ ಮೂರು ದಶಕಗಳ ಸಿಪಿಐ-ಎಂ ಆಡಳಿತವನ್ನು ಸೋಲಿಸಿದ್ದೇನೆ ಮತ್ತು ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇನೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


