ಕೊಚ್ಚಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!
ಕೇರಳದ ಕೊಚ್ಚಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಸೋಮವಾರ ಬೆದರಿಕೆ ಬಂದಿದೆ.

ಕೊಚ್ಚಿ: ಕೇರಳದ ಕೊಚ್ಚಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಸೋಮವಾರ ಬೆದರಿಕೆ ಬಂದಿದೆ. 6E6482 ಇಂಡಿಗೋ ವಿಮಾನ ಬೆಳಗ್ಗೆ 10-30ಕ್ಕೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಬೇಕಿತ್ತು. ಆದರೆ, ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿ ತಪಾಸಣೆ ನಡೆಸಲಾಯಿತು. ಅಲ್ಲದೇ, ಹೆಚ್ಚಿನ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ಹೇಳಿವೆ.
ನಂತರ ಬಾಂಬ್ ನಿಷ್ಕ್ರೀಯ ದಳ, ರಾಜ್ಯ ಪೊಲೀಸ್ ಮತ್ತು ಭದ್ರತಾ ಇಲಾಖೆ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಘಟನೆ ವೇಳೆ ವಿಮಾನದಲ್ಲಿ 138 ಪ್ರಯಾಣಿಕರು ಮತ್ತು ಒಂದು ಮಗು ಇತ್ತು ಎನ್ನಲಾಗಿದೆ. ಎಲ್ಲರನ್ನು ಭದ್ರತಾ ಪ್ರದೇಶಕ್ಕೆ ಸ್ಥಳಾಂತರಿಸಿ, ಅವರ ಸಾಮಾನು ಸರಂಜಾಮುಗಳ ಮರು-ಪರಿಶೀಲನೆ ಮಾಡಲಾಯಿತು. ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಇಂಟರ್ನೆಟ್ ಕರೆ ಮೂಲವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ 18 ರಂದು ದೆಹಲಿ ವಿಮಾನ ನಿಲ್ದಾಣದಲ್ಲಿ ದೆಹಲಿ-ಪುಣೆ ವಿಸ್ತಾರಾ ಏರ್‌ಲೈನ್ಸ್ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಹುಸಿ ಕರೆ ಬಂದ ನಂತರ ಸುಮಾರು ಎಂಟು ಗಂಟೆಗಳ ಕಾಲ ವಿಮಾನ ಹಾರಾಟದಲ್ಲಿ ವಿಳಂಬವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


