ಮುಂಬೈನಲ್ಲಿ ನಡೆಯುವ ಪ್ರತಿಪಕ್ಷಗಳ ಸಭೆಯಲ್ಲಿ 'ಬಿಜೆಪಿ ಚಲೇ ಜಾವೋ'ಗೆ INDIA ಕರೆ
ಮುಂಬೈನಲ್ಲಿ ನಡೆಯಲಿರುವ ಎರಡು ದಿನಗಳ ಪ್ರತಿಪಕ್ಷಗಳ ಸಭೆಯಲ್ಲಿ 'ಬಿಜೆಪಿ ಚಲೇ ಜಾವೋ'ಗೆ INDIA ಕರೆ ನೀಡಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಸೋಮವಾರ ಹೇಳಿದ್ದಾರೆ.

ಮುಂಬೈ: ಮುಂಬೈನಲ್ಲಿ ನಡೆಯಲಿರುವ ಎರಡು ದಿನಗಳ ಪ್ರತಿಪಕ್ಷಗಳ ಸಭೆಯಲ್ಲಿ 'ಬಿಜೆಪಿ ಚಲೇ ಜಾವೋ'ಗೆ INDIA ಕರೆ ನೀಡಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಸೋಮವಾರ ಹೇಳಿದ್ದಾರೆ.
ಪ್ರತಿಪಕ್ಷಗಳ ಮೈತ್ರಿಕೂಟ, ಪ್ರಧಾನಿ ಹುದ್ದೆಗೆ ಅನೇಕ ಸಮರ್ಥ ಅಭ್ಯರ್ಥಿಗಳನ್ನು ಹೊಂದಿದೆ ಮತ್ತು ಪ್ರಸ್ತುತ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿರುವ ಕೆಲವು ಪಕ್ಷಗಳು ಇಂಡಿಯಾಗೆ ಸೇರಬಹುದು ಎಂದು ಪಟೋಲೆ ಅವರು ತಿಳಿಸಿದ್ದಾರೆ.
ಈಗ ಎರಡು ಡಜನ್‌ಗಿಂತಲೂ ಹೆಚ್ಚು ಪಕ್ಷಗಳನ್ನು ಹೊಂದಿರುವ ಬಿಜೆಪಿ ವಿರೋಧಿ ಬಣ ಇಂಡಿಯಾದ ಪ್ರಮುಖ ನಾಯಕರು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈ ಉಪನಗರದಲ್ಲಿರುವ ಐಷಾರಾಮಿ ಹೋಟೆಲ್‌ನಲ್ಲಿ ಸಭೆ ನಡೆಸುತ್ತಿದ್ದು, ಇದು ಪ್ರತಿಪಕ್ಷಗಳ ಮೂರನೇ ಸಭೆಯಾಗಿದೆ.
ಇಂದು ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಲೆ, ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರ್ಧ ಡಜನ್ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದನ್ನು ಓದಿ: INDIA ಸಂಚಾಲಕನಾಗಲು ಇಷ್ಟವಿಲ್ಲ, ಒಗ್ಗಟ್ಟಿನ ಮೂಲಕ ಬೇರೆಯವರನ್ನು ಆಯ್ಕೆ ಮಾಡುತ್ತೇವೆ: ನಿತೀಶ್ ಕುಮಾರ್
ಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಲಾಂಛನವನ್ನು ಅನಾವರಣಗೊಳಿಸಲಾಗುವುದು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಕಾರ್ಯಸೂಚಿಯನ್ನು ಪ್ರತಿಪಕ್ಷ ನಾಯಕರು ಚರ್ಚಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.
ಮಹಾತ್ಮ ಗಾಂಧಿಯವರು 1942 ರಲ್ಲಿ ಮುಂಬೈನಲ್ಲಿಯೇ ಬ್ರಿಟಿಷರಿಗೆ 'ಚಲೇ ಜಾವೋ'(ಭಾರತ ಬಿಟ್ಟು ತೊಲಗಿ) ಘೋಷಣೆ ನೀಡಿದ್ದರು. ಅದೇ ರೀತಿ ಮುಂಬೈನಲ್ಲಿ ನಡೆಯಲಿರುವ ಇಂಡಿಯಾ ಸಮಾವೇಶದಲ್ಲಿ ಮೋದಿ ಸರ್ಕಾರ ‘ಚಲೇ ಜಾವೋ’... ‘ಬಿಜೆಪಿ ‘ಚಲೇ ಜಾವೋ’ ಘೋಷಣೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


