ದೇಶ

ಮಧುರೈ ರೈಲಿಗೆ ಬೆಂಕಿ: ಐವರು ಕೇಟರಿಂಗ್ ಕೆಲಸಗಾರರ ಬಂಧನ

9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಐವರು ಕೇಟರಿಂಗ್ ಕೆಲಸಗಾರರನ್ನು ಬಂಧಿಸಿದ್ದಾರೆ.

ಮಧುರೈ ರೈಲಿಗೆ ಬೆಂಕಿ: ಐವರು ಕೇಟರಿಂಗ್ ಕೆಲಸಗಾರರ ಬಂಧನ
ಹೊತ್ತಿ ಉರಿದ ರೈಲು
Published On :

ಮಧುರೈ: 9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಬಳಸಿದ ಆರೋಪದ ಮೇಲೆ ಪೊಲೀಸರು ಸೋಮವಾರ ಐವರು ಕೇಟರಿಂಗ್ ಕೆಲಸಗಾರರನ್ನು ಬಂಧಿಸಿದ್ದಾರೆ.

ಬಂಧಿತ ಕೇಟರಿಂಗ್ ಕೆಲಸಗಾರರು ಉತ್ತರ ಪ್ರದೇಶದ ಯಾತ್ರಾರ್ಥಿಗಳ ಗುಂಪಿನೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ದುರಂತದ ನಂತರ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದ ಸರ್ಕಾರಿ ರೈಲ್ವೆ ಪೊಲೀಸರು ಒಂದು ದಿನ ತೀವ್ರ ವಿಚಾರಣೆ ನಡೆಸಿದ ನಂತರ ಇಂದು ಅವರನ್ನು ಬಂಧಿಸಲಾಗಿದೆ.

ಬಂಧಿತರನ್ನು ಮಧುರೈನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಸೆಪ್ಟೆಂಬರ್ 11 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಟೂರ್ ಆಪರೇಟರ್ ಕಾಯ್ದಿರಿಸಿದ್ದ ಖಾಸಗಿ ಕೋಚ್‌ನಲ್ಲಿ ಹಲವು ಜನ ತೀರ್ಥಯಾತ್ರೆಗೆ ಹೊರಟಿದ್ದರು. ಕೋಚ್‌ನಲ್ಲಿ ಯಾತ್ರಾರ್ಥಿಗಳು, ಪ್ರವಾಸ ಸಂಘಟಕರು ಮತ್ತು ಐವರು ಅಡುಗೆ ಕೆಲಸಗಾರರು ಸೇರಿದಂತೆ ಒಟ್ಟು 64 ಪ್ರಯಾಣಿಕರಿದ್ದರು.

ಕಳೆದ ಶನಿವಾರ ಬೆಂಕಿ ಅವಘಡ ಸಂಭವಿಸಿ 9 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.