ದೇಶ

ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ, ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್

ಮಧುರೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಂಗಳವಾರ ಲ್ಯಾಂಡಿಂಗ್‌ಗೂ ಮುನ್ನ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಒಂದು ಎಂಜಿನ್ ಆಫ್ ಆಗಿದೆ.

ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ, ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್
ಇಂಡಿಗೋ ವಿಮಾನ
Published On :

ಮುಂಬೈ: ಮಧುರೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಂಗಳವಾರ ಲ್ಯಾಂಡಿಂಗ್‌ಗೂ ಮುನ್ನ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಒಂದು ಎಂಜಿನ್ ಆಫ್ ಆಗಿದೆ. ಆದರೂ ಪೈಲಟ್ ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ.

ಪೈಲಟ್ ವಿಮಾನವನ್ನು ಮುಂಬೈನಲ್ಲಿ ಆದ್ಯತೆ ಮೇಲೆ ಲ್ಯಾಂಡಿಂಗ್ ಮಾಡಿದ್ದು, ವಿಮಾನವು ಸುರಕ್ಷಿತವಾಗಿ ತನ್ನ ಗಮ್ಯಸ್ಥಾನವನ್ನು ತಲುಪಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಅವಳಿ-ಎಂಜಿನ್ ನ ಏರ್‌ಬಸ್ A321 (VT-IUJ)ದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಒಂದು ಎಂಜಿನ್‌ ಅನ್ನು ಆಫ್ ಮಾಡಿದ್ದಾರೆ. ಅದರ ಇನ್ನೊಂದು ಎಂಜಿನ್‌ ನ ಕಾರ್ಯಾಚರಣೆಯೊಂದಿಗೆ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.

ಇಲ್ಲಿಯವರೆಗೆ ಲಭ್ಯವಿರುವ ಮಾಹಿತಿ ಪ್ರಕಾರ, ವಿಮಾನವು ಪ್ರಸ್ತುತ ಮುಂಬೈನಲ್ಲಿದ್ದು, ಅಗತ್ಯ ನಿರ್ವಹಣೆಯ ನಂತರ ಮತ್ತೆ ಕಾರ್ಯಾಚರಣೆಗೆ ಬರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.