ದೇಶ

ಸಾಧುನ ತಡೆಯಬೇಡಿ, ಅವರು ಯಾವಾಗ ಸಿಎಂ ಆಗುತ್ತಾರೋ ಗೊತ್ತಿಲ್ಲ: ವರುಣ್ ಗಾಂಧಿ

ಬಿಜೆಪಿ ಸಂಸದ ವರುಣ್ ಗಾಂಧಿ ಅವರು ತಮ್ಮದೇ ಪಕ್ಷದ ಕಾರ್ಯಕ್ರಮವೊಂದರಲ್ಲಿ "ಸಾಧು ಯಾವಾಗ ಸಿಎಂ ಆಗುತ್ತಾರೆ ಅಂತ ಯಾರಿಗೂ ಗೊತ್ತಿಲ್ಲ. ಹೀಗಾಗಿ ಅವರನ್ನು ತಡೆಯಬೇಡಿ ಎಂದು ತಮ್ಮ ಬೆಂಬಲಿಗರಿಗೆ ಕೇಳಿಕೊಂಡ ಘಟನೆ ಸೋಮವಾರ...

ಸಾಧುನ ತಡೆಯಬೇಡಿ, ಅವರು ಯಾವಾಗ ಸಿಎಂ ಆಗುತ್ತಾರೋ ಗೊತ್ತಿಲ್ಲ: ವರುಣ್ ಗಾಂಧಿ
ವರುಣ್ ಗಾಂಧಿ
Published On :

ಪಿಲಿಭಿತ್‌: ಬಿಜೆಪಿ ಸಂಸದ ವರುಣ್ ಗಾಂಧಿ ಅವರು ತಮ್ಮದೇ ಪಕ್ಷದ ಕಾರ್ಯಕ್ರಮವೊಂದರಲ್ಲಿ "ಸಾಧು ಯಾವಾಗ ಸಿಎಂ ಆಗುತ್ತಾರೆ ಅಂತ ಯಾರಿಗೂ ಗೊತ್ತಿಲ್ಲ. ಹೀಗಾಗಿ ಅವರನ್ನು ತಡೆಯಬೇಡಿ ಎಂದು ತಮ್ಮ ಬೆಂಬಲಿಗರಿಗೆ ಕೇಳಿಕೊಂಡ ಘಟನೆ ಸೋಮವಾರ ನಡೆದಿದ.

ವರುಣ್ ಗಾಂಧಿ ಅವರು ತಮ್ಮ ಕ್ಷೇತ್ರ ಪಿಲಿಭಿತ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ಸಾಧು ಒಬ್ಬರ ಫೋನ್ ರಿಂಗಣಿಸಲು ಪ್ರಾರಂಭಿಸಿತು. ಈ ವೇಳೆ ಅವರ ಬೆಂಬಲಿಗರು ಫೋನ್ ಸ್ವಿಚ್ ಆಫ್ ಮಾಡುವಂತೆ ಸಾಧುಗೆ ಕೇಳಿಕೊಂಡರು.

"ದಯವಿಟ್ಟು ಅವರನ್ನು ತಡೆಯಬೇಡಿ, ಸಾಧು ಸಹ ಯಾವಾಗ ಸಿಎಂ ಆಗುತ್ತಾರೋ ಗೊತ್ತಿಲ್ಲ. ಆಗ ನಮ್ಮ ಗತಿ ಏನು?" ಎಂದು ಗಾಂಧಿ ತಮಾಷೆ ಮಾಡಿದರು.

ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಉಲ್ಲೇಖಿಸಿ ವರುಣ್ ಗಾಂಧಿ ಹೀಗೆ ಟಾಂಗ್ ನೀಡಿದ್ದಾರೆ ಎಂದು ಜನ ವ್ಯಾಖ್ಯಾನಿಸಿದ್ದಾರೆ. ಆದಿತ್ಯನಾಥ್ ಅವರು ಸದಾ ಸಾಧು ಉಡುಗೆಯಲ್ಲೇ ಇರುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.