ದೇಶ

ಪುಣೆ: ಎಲೆಕ್ಟ್ರಿಕ್ ಹಾರ್ಡ್‌ವೇರ್ ಅಂಗಡಿಯಲ್ಲಿ ಅಗ್ನಿ ಅವಘಡ, ಇಬ್ಬರು ಅಪ್ರಾಪ್ತರು ಸೇರಿ ನಾಲ್ವರ ಸಜೀವ ದಹನ

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್‌ ಪಟ್ಟಣದ ಚಿಖ್ಲಿ ಪ್ರದೇಶದ ಪೂರ್ಣ ನಗರದಲ್ಲಿರುವ ಪೂಜಾ ಹೈಟ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.

ಪುಣೆ: ಎಲೆಕ್ಟ್ರಿಕ್ ಹಾರ್ಡ್‌ವೇರ್ ಅಂಗಡಿಯಲ್ಲಿ ಅಗ್ನಿ ಅವಘಡ, ಇಬ್ಬರು ಅಪ್ರಾಪ್ತರು ಸೇರಿ ನಾಲ್ವರ ಸಜೀವ ದಹನ
ಸಾಂದರ್ಭಿಕ ಚಿತ್ರ
Published On :

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್‌ ಪಟ್ಟಣದ ಚಿಖ್ಲಿ ಪ್ರದೇಶದ ಪೂರ್ಣ ನಗರದಲ್ಲಿರುವ ಪೂಜಾ ಹೈಟ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.

ಬೆಂಕಿ ಅವಘಡ ಬುಧವಾರ ಮುಂಜಾನೆ 5 ಗಂಟೆಯ ವೇಳೆಗೆ ಸಂಭವಿಸಿದೆ. ಎಲೆಕ್ಟ್ರಿಕ್ ಅಂಗಡಿಯ ಹಿಂಭಾಗದಲ್ಲಿ ಕುಟುಂಬವೊಂದು ವಾಸವಿದ್ದು, ಬೆಂಕಿ ಹೊತ್ತಿಕೊಂಡ ಸಂದರ್ಭ ಅವರು ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

'ಮೃತರಲ್ಲಿ ಇಬ್ಬರು ಬಾಲಕರು ಇದ್ದಾರೆ. ನಾಲ್ವರೂ ಹಾರ್ಡ್‌ವೇರ್ ಅಂಗಡಿಯಲ್ಲೇ ಮಲಗಿದ್ದರು. ಮೃತದೇಹಗಳನ್ನು ಹೊರತೆಗೆಯಲಾಗಿದೆ’ಎಂದು ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಶನ್‌ನ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅನಾಹುತ ಸಂಭವಿಸಿರುಬಹುದು ಎಂದು ಶಂಕಿಸಲಾಗಿದೆ. ಆದರೂ ತನಿಖೆ ನಡೆಸಲಾಗುತ್ತಿದ್ದು, ಸದ್ಯ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಚಿಮ್ನಾರಾಮ್ ಚೌಧರಿ (48), ನಮ್ರತಾ ಚಿಮ್ನಾರಾಮ್ ಚೌಧರಿ (40), ಭವೇಶ್ ಚೌಧರಿ (15) ಮತ್ತು ಸಚಿನ್ ಚೌಧರಿ (13) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.