ದೇಶ

ಹೆಂಡತಿಯನ್ನು ರೇಗಿಸಿದ್ದಕ್ಕೆ ಅಪ್ರಾಪ್ತನನ್ನು ಕೊಂದು ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿದ ಆಟೋ ಚಾಲಕ, ಬಂಧನ

17 ವರ್ಷದ ಬಾಲಕನನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತ ಅವ್ಹಾದ್ ಎಂಬಾತ 33 ವರ್ಷದ ಅಹ್ಮದ್ ಶೇಖ್ ಅವರ ಪತ್ನಿ ಮತ್ತು ಆಕೆಯ ತಂಗಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದನು.

ಹೆಂಡತಿಯನ್ನು ರೇಗಿಸಿದ್ದಕ್ಕೆ ಅಪ್ರಾಪ್ತನನ್ನು ಕೊಂದು ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿದ ಆಟೋ ಚಾಲಕ, ಬಂಧನ
ಪ್ರಾತಿನಿಧಿಕ ಚಿತ್ರ
Published On :

ಮುಂಬೈ: 17 ವರ್ಷದ ಬಾಲಕನನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಈ ಸಂಬಂಧ ಹಲವು ಬಾರಿ ಎಚ್ಚರಿಕೆ ನೀಡಿದರೂ, ಆತ ತನ್ನ ಅಸಭ್ಯ ವರ್ತನೆಯನ್ನು ಮುಂದುವರೆಸಿದ್ದನು. ಇದರಿಂದ ಆತನನ್ನು ಕೊಲೆ ಮಾಡಲು ಆರೋಪಿ ನಿರ್ಧರಿಸಿದನು. ಈ ಸಂಬಂಧ ಹಲವು ಬಾರಿ ಎಚ್ಚರಿಕೆ ನೀಡಿದರೂ, ಯುವಕ ತನ್ನ ಅಸಭ್ಯ ವರ್ತನೆಯನ್ನು ಮುಂದುವರೆಸಿದ್ದನು. ಇದರಿಂದ ಆತನನ್ನು ಕೊಲೆ ಮಾಡಲು ಆರೋಪಿ ನಿರ್ಧರಿಸಿದನು. 

ಆಗಸ್ಟ್ 28 ರಂದು, ಶೇಖ್ ಸಂತ್ರಸ್ತನನ್ನು  ಉಪನಗರ ಚೆಂಬೂರ್‌ನ ಎಂಎಚ್ಎಡಿಎ ಪ್ರದೇಶದ ತನ್ನ ಅಪಾರ್ಟ್‌ಮೆಂಟ್‌ಗೆ ಕರೆದೊಯ್ದಿದ್ದಾನೆ. ಅಲ್ಲಿ ಆತನಿಗೆ ಇರಿದು ಕೊಲೆ ಮಾಡಿದ್ದಾನೆ. ಬಳಿಕ ದೇಹವನ್ನು ಐದು ತುಂಡುಗಳನ್ನಾಗಿ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಶ್ವರ್ ಅವ್ಹಾದ್ ಹೇಳಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷಾಧಾರಗಳ ನಾಪತ್ತೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಅವ್ಹಾದ್ ನಾಪತ್ತೆಯಾದಾಗ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತನಿಗೆ ಬಹಳ ದಿನಗಳಿಂದ ಪರಿಚಿತನಾಗಿದ್ದ ಆರೋಪಿ ಶೇಖ್‌ನ ಮಾವನೇ ನಾಪತ್ತೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ವಿಚಾರಣೆಗಾಗಿ ಶೇಖ್‌ನನ್ನು ಕರೆದಾಗ, ಆತನೇ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಪೊಲೀಸರಿಗೆ ವ್ಯಕ್ತವಾಗಿದೆ. ನಿರಂತರ ವಿಚಾರಣೆಯ ಸಮಯದಲ್ಲಿ ಶೇಖ್ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. 

ಆರೋಪಿಯ ಅಡುಗೆ ಮನೆಯಲ್ಲಿ ಶವ ಪತ್ತೆಯಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.