ದೇಶ

ಮಣಿಪುರ: ಗುಂಡಿನ ಚಕಮಕಿಯಲ್ಲಿ ಬುಡಕಟ್ಟು ಗೀತರಚನೆಕಾರ ಸೇರಿ ನಾಲ್ವರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ-ಜೋ ಗೀತರಚನೆಕಾರ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಮಣಿಪುರ: ಗುಂಡಿನ ಚಕಮಕಿಯಲ್ಲಿ ಬುಡಕಟ್ಟು ಗೀತರಚನೆಕಾರ ಸೇರಿ ನಾಲ್ವರು ಸಾವು
ಮಣಿಪುರದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ.
Published On :

ಗುವಾಹಟಿ: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ-ಜೋ ಗೀತರಚನೆಕಾರ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಗೀತರಚನೆಕಾರ ಎಲ್ಎಸ್ ಮಂಗ್ಬೋಯಿ ಲುಂಗ್ಡಿಮ್ (42) ಮತ್ತು ಇತರ ಇಬ್ಬರು ಕುಕಿ-ಜೋ ಬುಡಕಟ್ಟು ಜನಾಂಗದವರು ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚುರಾಚಂದ್‌ಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಂಜೆ ನಂತರ ಲುಂಗ್ಡಿಮ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಾಗ, ಅವರನ್ನು ರಸ್ತೆಯ ಮೂಲಕ ಗುವಾಹಟಿಗೆ ಸ್ಥಳಾಂತರಿಸಲಾಯಿತು. ಆದರೆ ಗುರುವಾರ ಬೆಳಗ್ಗೆ ಅವರು ಸಾವನ್ನಪ್ಪಿದರು. ನಂತರ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಸಹ ಸಾವನ್ನಪ್ಪಿದ್ದಾರೆ.

ಇನ್ನು ಇಂದು ನಡೆದ ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಇನ್ನಿಬ್ಬರು ಆದಿವಾಸಿಗಳು ಸಾವನ್ನಪ್ಪಿದ್ದು, ಇಬ್ಬರು ಆದಿವಾಸಿಗಳು ಗಾಯಗೊಂಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.