ದೇಶ

ಮಣಿಪುರ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ 18 ಕೋಟಿ ರೂ. ಲೂಟಿ ಮಾಡಿದ ಶಸ್ತ್ರಸಜ್ಜಿತ ಡಕಾಯಿತರು!

ಮಣಿಪುರದ ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್ ಧರಿಸಿದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಕುರಿತು ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಣಿಪುರ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ 18 ಕೋಟಿ ರೂ. ಲೂಟಿ ಮಾಡಿದ ಶಸ್ತ್ರಸಜ್ಜಿತ ಡಕಾಯಿತರು!
ಪಂಜಾಬ್ ನ್ಯಾಷನಲ್ ಬ್ಯಾಂಕಿನ ಶಾಖೆಯೊಂದರಲ್ಲಿ ಶಸ್ತ್ರಸಜ್ಜಿತ ಡಕಾಯಿತರಿಂದ ದರೋಡೆ
Published On :

ಇಂಫಾಲ: ಮಣಿಪುರದ ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್ ಧರಿಸಿದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಈ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯು ಭಾರತೀಯ ರಿಸರ್ವ್ ಬ್ಯಾಂಕ್ ಉಖ್ರುಲ್ ಜಿಲ್ಲೆಯ ಇತರೆ ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ಮೀಸಲಾದ ಹಣವನ್ನು ಸಂಗ್ರಹಿಸುವ ಕರೆನ್ಸಿ ಚೆಸ್ಟ್ ಆಗಿದೆ.

ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದರೋಡೆಕೋರರು ರಾಜ್ಯ ರಾಜಧಾನಿ ಇಂಫಾಲ್‌ನಿಂದ ಸುಮಾರು 80 ಕಿಮೀ ದೂರದಲ್ಲಿರುವ ಉಖ್ರುಲ್ ಪಟ್ಟಣದ ಬ್ಯಾಂಕ್‌ಗೆ ಆಗಮಿಸಿ, ಭದ್ರತಾ ಸಿಬ್ಬಂದಿಯನ್ನು ಬೆದರಿಸಿ ಹಣವನ್ನು ದೋಚಿದ್ದಾರೆ.

ದುಷ್ಕರ್ಮಿಗಳು, ನೌಕರರು ಮತ್ತು ಭದ್ರತಾ ಸಿಬ್ಬಂದಿಯನ್ನು ಬ್ಯಾಂಕ್‌ನ ವಾಶ್‌ರೂಮ್‌ನೊಳಗೆ ಲಾಕ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗನ್ ಪಾಯಿಂಟ್‌ನಲ್ಲಿ ಬ್ಯಾಂಕ್‌ನ ಹಿರಿಯ ಸಿಬ್ಬಂದಿಯಿಂದಲೇ ವಾಲ್ಟ್ ತೆರೆಯಿಸಿದ್ದು, ಬಳಿಕ ದರೋಡೆಕೋರರು ಹಣವನ್ನು ದೋಚಿದ್ದಾರೆ. ಈ ಕುರಿತು ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿಗಳನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.