ದೇಶ

ಬಿಜೆಪಿ ಜತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ: ಅಜಿತ್ ಪವಾರ್ ಹೇಳಿಕೆಗೆ ಶರದ್ ಪವಾರ್ ಸ್ಪಷ್ಟನೆ

ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನಿಲುವು ಯಾವಾಗಲೂ ಸ್ಪಷ್ಟವಾಗಿರುತ್ತದೆ ಮತ್ತು ಇದಕ್ಕೆ ವಿರುದ್ಧವಾಗಿ ಯಾವುದೇ ಸಲಹೆ ಬಂದರೂ ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ನ್ಯಾಶನಲಿಸ್ಟ್...

ಬಿಜೆಪಿ ಜತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ: ಅಜಿತ್ ಪವಾರ್ ಹೇಳಿಕೆಗೆ ಶರದ್ ಪವಾರ್ ಸ್ಪಷ್ಟನೆ
ಅಜಿತ್ ಪವಾರ್ - ಶರದ್ ಪವಾರ್
Published On :

ಪುಣೆ: ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನಿಲುವು ಯಾವಾಗಲೂ ಸ್ಪಷ್ಟವಾಗಿರುತ್ತದೆ ಮತ್ತು ಇದಕ್ಕೆ ವಿರುದ್ಧವಾಗಿ ಯಾವುದೇ ಸಲಹೆ ಬಂದರೂ ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ಶನಿವಾರ ಹೇಳಿದ್ದಾರೆ.

ಎನ್ ಸಿಪಿ ವಿರುದ್ಧ ಬಂಡಾಯ ಎದ್ದು ಬಿಜೆಪಿ ಜೊತೆ ಕೈಜೋಡಿಸಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ನಿನ್ನೆಯಷ್ಟೇ ಶರದ್ ಪವಾರ್ ನೇತೃತ್ವದ ಗುಂಪು ಪ್ಯಾಚ್-ಅಪ್ ಗಾಗಿ ತನ್ನನ್ನು ಸಂಪರ್ಕಿಸುತ್ತಿದೆ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಪುಣೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಹಿರಿಯ ರಾಜಕಾರಣಿ, "ನಾವು ತೆಗೆದುಕೊಂಡ ನಿಲುವಿಗೆ ವಿರುದ್ಧವಾಗಿ, ಬಿಜೆಪಿಯನ್ನು ಬೆಂಬಲಿಸಬೇಕೆಂದು ಯಾರಾದರೂ ಸೂಚಿಸಿದರೆ, ನಾನು ಸೇರಿದಂತೆ ಪಕ್ಷದ ಅನೇಕರು ಅದನ್ನು ಒಪ್ಪುವುದಿಲ್ಲ. ಬಿಜೆಪಿಯೊಂದಿಗೆ ಹೋಗುವುದಿಲ್ಲ ಎಂಬ ನಮ್ಮ ನಿಲುವು ತುಂಬಾ ಸ್ಪಷ್ಟವಾಗಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಿನ ಜಾವ ಪ್ರಮಾಣ ವಚನ ಸ್ವೀಕರಿಸಿದ್ದ ಯಾರಾದರೂ ಬಿಜೆಪಿ ಬೆಂಬಲಿಸುವುದು ಪಕ್ಷದ ನೀತಿ ಎಂದು ಹೇಳಿರಬಹುದು. ಆದರೆ ಆ ವ್ಯಕ್ತಿಯನ್ನು ಯಾರೂ 'ಗಂಭೀರವಾಗಿ ತೆಗೆದುಕೊಳ್ಳಬಾರದು' ಎಂದು ಎನ್‌ಸಿಪಿ ಮುಖ್ಯಸ್ಥ ಪರೋಕ್ಷವಾಗಿ ಅಜಿತ್‌ ಪವಾರ್ ಗೆ ಟಾಂಗ್ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.