ಮುಂಬೈ: ಮೆಕ್ಸಿಕನ್ ಮಹಿಳಾ ಡಿಜೆ ಮೇಲೆ ಅತ್ಯಾಚಾರ, ವ್ಯಕ್ತಿ ಬಂಧನ
31 ವರ್ಷದ ಮೆಕ್ಸಿಕನ್ ಮಹಿಳಾ ಡಿಸ್ಕ್ ಜಾಕಿ (ಡಿಜೆ) ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: 31 ವರ್ಷದ ಮೆಕ್ಸಿಕನ್ ಮಹಿಳಾ ಡಿಸ್ಕ್ ಜಾಕಿ (ಡಿಜೆ) ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
35 ವರ್ಷದ ಆರೋಪಿ ಕೂಡ ಡಿಜೆ ಆಗಿದ್ದು, ಸಂತ್ರಸ್ತೆ ಕಳೆದ ವಾರ ಆತನ ವಿರುದ್ಧ ದೂರು ನೀಡಿದ ನಂತರ ಶುಕ್ರವಾರ ಆತನನ್ನು ಬಂಧಿಸಲಾಗಿದೆ ಎಂದು ಬಾಂದ್ರಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ದೂರಿನ ಪ್ರಕಾರ, ಆರೋಪಿಯು 2019 ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಮಹಿಳೆ ಪ್ರಸ್ತುತ ಮುಂಬೈನಲ್ಲಿ ವಾಸಿಸುತ್ತಿದ್ದು, ಆರೋಪಿ ಆಕೆಯ ಮ್ಯಾನೇಜರ್ ಎಂದು ಹೇಳಿದ್ದಾರೆ.
"2017 ರಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಆರೋಪಿಯನ್ನು ಭೇಟಿಯಾಗಿದ್ದೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಅವರು ಜುಲೈ 2019 ರಲ್ಲಿ ಬಾಂದ್ರಾದ ತನ್ನ ಮನೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ, ನಂತರ ಅವರು ಅನೇಕ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ್ದಾರೆ. ಆರೋಪಿಯು ತನ್ನನ್ನು ನಿರಾಕರಿಸಿದರೆ ಕೆಲಸದಿಂದ ಹೊರಹಾಕುವುದಾಗಿ ಬೆದರಿಕೆ ಹಾಕುವ ಮೂಲಕ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡುತ್ತಿದ್ದ. ಅಲ್ಲದೆ ತನ್ನ ಮೇಲಿನ ಅತ್ಯಾಚಾರವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಅದನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಮಾಡುತ್ತಿದ್ದ ಎಂದು ಆರೋಪಿಸಿದ್ದಾರೆ.
2020ರಲ್ಲಿ ಆತ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದರೂ, ಆರೋಪಿ ತನಗೆ ಅಸಭ್ಯ ಅನುಚಿತ ಚಿತ್ರಗಳನ್ನು ಕಳುಹಿಸುತ್ತಿದ್ದ. ಅಲ್ಲದೆ ಆಕೆಯಿಂದ ಲೈಂಗಿಕ ಬೇಡಿಕೆಗಳನ್ನು ಪೂರೈಸಿಕೊಳ್ಳುತ್ತಿದ್ದ. ದೂರಿನಲ್ಲಿ ಆರೋಪಿಸಿದ್ದಾರೆ.
ಇದನ್ನೂ ಓದಿ: ಒಡಿಶಾ: ವಿಷಕಾರಿ ಹಣ್ಣು ತಿಂದು 11 ಮಕ್ಕಳು ಅಸ್ವಸ್ಥ
ಆಕೆಯ ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 376 (ಅತ್ಯಾಚಾರ), 377 (ಅಸ್ವಾಭಾವಿಕ ಲೈಂಗಿಕತೆ), 354 (ಹೆಣ್ಣಿನ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


