ದೇಶ

ಕಾಂಗ್ರೆಸ್ ನ ಸುಳ್ಳು ಭರವಸೆಗಳನ್ನು ಜನರು ತಿರಸ್ಕರಿಸಿದ್ದಾರೆ: ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ಕಾಂಗ್ರೆಸ್ ನ ಸುಳ್ಳು ಭರವಸೆಗಳನ್ನು ಜನರು ತಿರಸ್ಕರಿಸಿದ್ದಾರೆ: ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ
Published On :

ನವದೆಹಲಿ: ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೆವು. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದರು.

ತೆಲಂಗಾಣದಲ್ಲಿ ಬಿಆರ್​ಎಸ್​​ನಿಂದ ಆಪರೇಷನ್​ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ 17 ಜನರನ್ನು ಯಾರು ಕಳಿಸಿದರು ಎಂದು ಕಿಡಿಕಾರಿದರು.

ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ. ಈ ಹಿಂದೆ ಕಾಂಗ್ರೆಸ್​ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್​ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಪ್ರಹ್ಲಾದ್​ ಜೋಶಿ ಕಿಡಿಕಾರಿದರು.

ವಿಜಯೇಂದ್ರ ಭೇಟಿ ಅಭಿನಂದನೆ: ರಾಜಸ್ಥಾನ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಹ್ಲಾದ್ ಜೋಶಿಯವರನ್ನು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.