ತೆಲಂಗಾಣ: ಡಿ. 4 ಅಥವಾ 9ಕ್ಕೆ ಕಾಂಗ್ರೆಸ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ಡಿಸೆಂಬರ್ 4 ಅಥವಾ 9 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ವ್ಯವಸ್ಥೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಕೇಳಿಕೊಂಡಿದ್ದಾರೆ ಎಂದು ತೆಲಂಗಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಹೈದ್ರಾಬಾದ್: ಡಿಸೆಂಬರ್ 4 ಅಥವಾ 9 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ವ್ಯವಸ್ಥೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಕೇಳಿಕೊಂಡಿದ್ದಾರೆ ಎಂದು ತೆಲಂಗಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ರೆಡ್ಡಿ ಅವರು ಡಿಜಿಪಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಎಡಿಜಿ ಸಿಐಡಿ ಅವರನ್ನು ಕರೆದು ಚರ್ಚಿಸಿದ್ದು, ಪ್ರಮಾಣ ವಚನ ಸಮಾರಂಭದ ಸಿದ್ಧತೆ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತೆಲಂಗಾಣ ಪೊಲೀಸ್ ಪ್ರಕಟಣೆ ತಿಳಿಸಿದೆ.
ತಮ್ಮ ಪಕ್ಷವು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲಿದೆ ಎಂದು ರೆಡ್ಡಿ ಅವರಿಗೆ ತಿಳಿಸಿದ್ದಾರೆ. 'ಇಂದು ಸಂಜೆಯಿಂದ ಶುಭ ಮುಹೂರ್ತ ಆರಂಭವಾಗಲಿದೆ ಎಂದು ಪಿಟಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಹಾಗಾಗೀ, ಸಾಧ್ಯವಾದರೆ ನಾಳೆ ಅಥವಾ ಡಿಸೆಂಬರ್ 9ರಂದು ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಅದು ಹೇಳಿದೆ.
ಎಲ್ ಬಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು,ಇದರಲ್ಲಿ ದೆಹಲಿಯ ಹಿರಿಯ ನಾಯಕರಲ್ಲದೆ ಹಲವು ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ರೆಡ್ಡಿ ಡಿಜಿಪಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


