ರಾಜಸ್ಥಾನದಲ್ಲಿ ಬಿಜೆಪಿ ಏಕೆ ಗೆದ್ದಿದೆ! ವಸುಂಧರಾ ರಾಜೇ ವಿವರಿಸಿದ್ದು ಹೀಗೆ..
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ನಾಯಕಿ ವಸುಂಧರಾ ರಾಜೇ ಸಿಂಧಿಯಾ ಅವರು ಝಲ್ರಾಪಟನ್‌ನಿಂದ ಗೆಲುವು ಸಾಧಿಸಿದ್ದಾರೆ.

ರಾಜಸ್ಥಾನ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ನಾಯಕಿ ವಸುಂಧರಾ ರಾಜೇ ಸಿಂಧಿಯಾ ಅವರು ಝಲ್ರಾಪಟನ್‌ನಿಂದ ಗೆಲುವು ಸಾಧಿಸಿದ್ದಾರೆ.
ಗೆಲುವಿನ ನಂತರ ಮಾತನಾಡಿದ ಅವರು, "ಈ ಗೆಲುವು ಪ್ರಧಾನಿ ಮೋದಿ ನೀಡಿದ 'ಸಬ್ಕಾ ಸಾಥ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್' ಮಂತ್ರವಾಗಿದೆ. ಇದು ಪ್ರಧಾನಿ ನೀಡಿದ ಭರವಸೆಯ ಗೆಲುವು. ಇದು ತಂತ್ರದ ಗೆಲುವು ಕೂಡ ಆಗಿದೆ. ಅಮಿತ್ ಶಾ ನೀಡಿದ ಕಾರ್ಯತಂತ್ರ ಮತ್ತು ನಡ್ಡಾಜಿ ಅವರ ಸಮರ್ಥ ನಾಯಕತ್ವದ ಗೆಲುವು, ಎಲ್ಲಕ್ಕಿಂತ ಮುಖ್ಯವಾಗಿ, ಇದು ನಮ್ಮ ಪಕ್ಷದ ಕಾರ್ಯಕರ್ತರ ಜಯ ಎಂದರು.
ವಸುಂಧರಾ ರಾಜೇ ಅವರ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದ ಝಲ್ರಾಪಟನ್ ಕ್ಷೇತ್ರದಿಂದ ಸಮೀಪದ ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ಅವರಿಗಿಂತ 51,000 ಕ್ಕೂ ಹೆಚ್ಚು ಮತಗಳಿಂದ ವಸುಂಧರಾ ರಾಜೇ ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


