ಮಣಿಪುರದಲ್ಲಿ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಶವ ಪತ್ತೆ: ಉಗ್ರರದ್ದೆಂಬ ಶಂಕೆ!
ಮಣಿಪುರದಲ್ಲಿನ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಮಂದಿಯ ಶವ ಪತ್ತೆಯಾಗಿದ್ದು, ಇವರನ್ನು ಉಗ್ರರೆಂದು ಶಂಕಿಸಲಾಗಿದೆ.

ಮಣಿಪುರ: ಮಣಿಪುರದಲ್ಲಿನ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಮಂದಿಯ ಶವ ಪತ್ತೆಯಾಗಿದ್ದು, ಇವರನ್ನು ಉಗ್ರರೆಂದು ಶಂಕಿಸಲಾಗಿದೆ.
ತೆಂಗನೌಪಾಲ್ ಜಿಲ್ಲೆಯಲ್ಲಿ ಈ ಶವಗಳು ಪತ್ತೆಯಾಗಿದ್ದು, ಈ ಪ್ರದೇಶ ಮ್ಯಾನ್ಮಾರ್ ನೊಂದಿಗೆ ಗಡಿ ಹಂಚಿಕೊಂಡಿದೆ. ಇದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರದಿಂದ ಪ್ರಭಾವಿತವಾದ ಜಿಲ್ಲೆಗಳಲ್ಲಿ ಒಂದಾಗಿದೆ.
ವರದಿಗಳ ಪ್ರಕಾರ ಸೋಮವಾರದಂದು ಜಿಲ್ಲೆಯ ಲೀತು ಎಂಬ ಗ್ರಾಮದಲ್ಲಿ ಉಗ್ರರು ತಮ್ಮ ನೆಲೆಗಳನ್ನು ಹೊಂದಿರುವ ಮ್ಯಾನ್ಮಾರ್‌ಗೆ ತೆರಳುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ 13 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ಮಣಿಪುರಿ ದಂಪತಿ ಮೇಲೆ ಗುಂಪು ಹಲ್ಲೆ
ಮೃತದೇಹಗಳು ಪತ್ತೆಯಾಗಿರುವುದನ್ನು ಪೊಲೀಸ್ ಮಹಾನಿರ್ದೇಶಕ ರಾಜೀಬ್ ಸಿಂಗ್ ಖಚಿತಪಡಿಸಿದ್ದಾರೆ. ಮೃತದೇಹಗಳನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
"ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದು ನಿಜ ಆದರೆ ಅವರು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆಯೇ ಎಂಬುದು ನಮಗೆ ತಿಳಿದಿಲ್ಲ. ತನಿಖೆಯ ನಂತರ ನಾವು ಅದನ್ನು ತಿಳಿಯುತ್ತೇವೆ ಎಂದು ಸಿಂಗ್ ಈ ಪತ್ರಿಕೆ ನೀಡಿದ್ದಾರೆ.
ಮೇ 3 ರಂದು ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ ಸುಮಾರು 200 ಜನರು ಸಾವನ್ನಪ್ಪಿದ್ದರೆ, 60,000 ಜನರು ಇದೇ ಕಾರಣದಿಂದ ಸ್ಥಳಾಂತರಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


