ಮಣಿಪುರ ಉಗ್ರಗಾಮಿ ಗುಂಪುಗಳ ನಡುವೆ ಗುಂಡಿನ ಚಕಮಕಿ; 13 ಮಂದಿ ಸಾವು
ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಸೋಮವಾರ ಉಗ್ರಗಾಮಿಗಳ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆಂಗ್ನೌಪಾಲ್: ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಸೋಮವಾರ ಉಗ್ರಗಾಮಿಗಳ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ ಲೀತು ಗ್ರಾಮದಲ್ಲಿ ಈ ಗುಂಡಿನ ಕಾಳಗ ನಡೆದಿದೆ ಎಂದು ಅವರು ಹೇಳಿದ್ದಾರೆ.
"ಮ್ಯಾನ್ಮಾರ್‌ಗೆ ತೆರಳುತ್ತಿದ್ದ ಉಗ್ರಗಾಮಿಗಳ ಗುಂಪನ್ನು ಈ ಪ್ರದೇಶದಲ್ಲಿ ಪ್ರಬಲವಾಗಿರುವ ಮತ್ತೊಂದು ಗುಂಪಿನ ಬಂಡುಕೋರರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ" ಎಂದು ಹಿಲ್ ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಭದ್ರತಾ ಪಡೆಗಳು ಇದುವರೆಗೆ 13 ಶವಗಳನ್ನು ಪತ್ತೆ ಮಾಡಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಆದರೆ ಅವರು ಸ್ಥಳೀಯರಲ್ಲ ಎಂದು ಹೇಳಿದ್ದಾರೆ.
ತೆಂಗ್ನೌಪಾಲ್ ಜಿಲ್ಲೆ ಮ್ಯಾನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


