ತೆಲಂಗಾಣ: ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಇಬ್ಬರು ಪೈಲಟ್ ಗಳು ಸಾವು
ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್ ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಹೈದರಾಬಾದ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್ ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ತೆಲಂಗಾಣದ ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ Pilatus ವಿಮಾನ ಪತನಗೊಂಡಿದೆ. ದುರಂತದ ವೇಳೆ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ.
ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಪೈಲಟ್‌ಗಳಲ್ಲಿ ಒಬ್ಬ ಬೋಧಕ ಮತ್ತು ಒಬ್ಬ ಕೆಡೆಟ್ ಇದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


