ಮೂರನೇ ಬಾರಿಗೆ ಮೋದಿ ಸರ್ಕಾರ: ಸಂಸತ್ತಿನಲ್ಲಿ ಘೋಷಣೆ ಮೊಳಗಿಸಿದ ಬಿಜೆಪಿ ಸಂಸದರು- ವಿಡಿಯೋ
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಗೆದ್ದು ಬೀಗುತ್ತಿರುವ ಕೇಸರಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಗೆದ್ದು ಬೀಗುತ್ತಿರುವ ಕೇಸರಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.
ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡು, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಪ್ರಮುಖ ಎದುರಾಳಿ ಕಾಂಗ್ರೆಸ್ ನಿಂದ ಅಧಿಕಾರ ಕಸಿದುಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಲ್ಲಿ ಆತ್ಮವಿಶ್ವಾಸ ಇಮ್ಮಡಿಗೊಂಡಿದ್ದು, ಗೆಲುವಿನ ಖುಷಿಯಲ್ಲಿ ತೇಲುತ್ತಿದ್ದಾರೆ. ಇದು ಇಂದಿನಿಂದ ಆರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೂ ಕಂಡುಬಂದಿತು.
ಲೋಕಸಭೆಯಲ್ಲಿ ಮೂರನೇ ಬಾರಿಗೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಸಂಸದರು ಘೋಷಣೆ ಮೊಳಗಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮೂರನೇ ಬಾರಿಗೆ ಮೋದಿ ಸರ್ಕಾರ, ಬಾರ್ ಬಾರ್ ಮೋದಿ ಸರ್ಕಾರ ಎಂದು ಘೋಷಣೆ ಕೂಗುವ ಮೂಲಕ ಕೇಸರಿ ಸಂಸದರು ಸಂಭ್ರಮಪಟ್ಟರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


