2023 ರಲ್ಲಿ ಕಾಂಗ್ರೆಸ್ ಗೆ 80 ಕೋಟಿ ರೂ. ದೇಣಿಗೆ: ಆಡಳಿತರೂಢ ಬಿಜೆಪಿ ಗಳಿಸಿದ್ದೆಷ್ಟು ಗೊತ್ತೆ?
2023 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ 80 ಕೋಟಿ ರೂಪಾಯಿ ದೇಣಿಗೆ ಹರಿದುಬಂದಿದೆ.

ನವದೆಹಲಿ: 2023 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ 80 ಕೋಟಿ ರೂಪಾಯಿ ದೇಣಿಗೆ ಹರಿದುಬಂದಿದೆ.
ಸಂಸ್ಥೆಗಳು, ಪಕ್ಷದ ನಾಯಕರು, ವ್ಯಕ್ತಿಗಳು, ಚುನಾವಣಾ ಟ್ರಸ್ಟ್‌ಗಳಿಂದ ಕಾಂಗ್ರೆಸ್ ಗೆ 80 ಕೋಟಿ ರೂಪಾಯಿ ದೇಣಿಗೆ ಬಂದಿದೆ. ಈ ಕುರಿತ ಮಾಹಿತಿಯನ್ನು ಚುನಾವಣಾ ಆಯೋಗ ಡಿ.04 ರಂದು ಸಾರ್ವಜನಿಕ ಡೊಮೈನ್ ನಲ್ಲಿ ಪ್ರಕಟಿಸಿದೆ.
ಕಾಂಗ್ರೆಸ್ ಗೆ ಕೋಲ್ಕತ್ತಾ ಮೂಲದ ಸಮಾಜ ಚುನಾವಣಾ ಟ್ರಸ್ಟ್ ಒಂದೇ 50 ಲಕ್ಷ ರೂಪಾಯಿ ನೀಡಿದೆ. ಮತ್ತೊಂದೆಡೆ, ಆಡಳಿತಾರೂಢ ಬಿಜೆಪಿ 2022-23ರ ಆರ್ಥಿಕ ವರ್ಷದಲ್ಲಿ ಸಂಸ್ಥೆಗಳು, ಚುನಾವಣಾ ಟ್ರಸ್ಟ್‌ಗಳು, ವ್ಯಕ್ತಿಗಳು ಮತ್ತು ಅದರ ಶಾಸಕರಿಂದ ಸುಮಾರು 720 ಕೋಟಿ ರೂಪಾಯಿಗಳನ್ನು ಕೊಡುಗೆಯಾಗಿ ಸ್ವೀಕರಿಸಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷಗಳಾಗಿದ್ದು ಒಂದು ಹಣಕಾಸು ವರ್ಷದಲ್ಲಿ 20,000 ರೂ.ಗಿಂತ ಹೆಚ್ಚಿನ ದೇಣಿಗೆ ನೀಡಿದ ದಾನಿಗಳ ವಿವರಗಳನ್ನು ರಾಜಕೀಯ ಪಕ್ಷಗಳು ಪ್ರತಿ ವರ್ಷ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


