ಮಿಚಾಂಗ್ ಚಂಡಮಾರುತ: ಮುಳುಗಿದ ಚೆನ್ನೈ, ವಿದ್ಯುತ್ ಸ್ಥಗಿತ; '2015ರ ಪ್ರವಾಹದ ನಂತರ ಅತಿ ದೊಡ್ಡ ಮಳೆ'
ಮಿಚಾಂಗ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಅದರಲ್ಲೂ ಚೆನ್ನೈನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ರಾಜಧಾನಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಾಮಾನ್ಯ ಜನಜೀವನ...

ಚೆನ್ನೈ: ಮಿಚಾಂಗ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಅದರಲ್ಲೂ ಚೆನ್ನೈನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ರಾಜಧಾನಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಇಂದು ಚೆನ್ನೈನಲ್ಲಿ ಸುರಿದ ಮಳೆಯು 2015ರ ಪ್ರವಾಹದ ನಂತರ ಸುರಿದ "ಅ ತಿದೊಡ್ಡ ಮಳೆ"ಯಾಗಿದೆ ಎಂದು ಸ್ವತಂತ್ರ ಹವಾಮಾನ ಮುನ್ಸೂಚಕ ತಮಿಳುನಾಡು ವೆದರ್‌ಮ್ಯಾನ್ ಹೇಳಿದೆ.
"ಬೆಳಗ್ಗೆ 8.30 ರಿಂದ ಮಳೆ ನಿರಂತವಾಗಿ ಸುರಿಯುತ್ತಿದೆ. ಇದು ಹೀಗೆ ಮುಂದುವರೆದರೆ 24 ಗಂಟೆಗಳಲ್ಲಿ ಮಳೆ 300 ಮಿಲಿ ಮೀಟರ್ ಗೂ ಹೆಚ್ಚಾಗಿರುತ್ತದೆ" ಎಂದು ವೆದರ್‌ಮ್ಯಾನ್ ಪ್ರದೀಪ್ ಜಾನ್ ಅವರು ತಿಳಿಸಿದ್ದಾರೆ.
ಸೋಮವಾರ ತಡರಾತ್ರಿಯವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದು, ಸಹಜ ಸ್ಥಿತಿಗೆ ಮರಳಲು ಸ್ವಲ್ಪ ಸಮಯ ಹಿಡಿಯಲಿದೆ.
ಇದನ್ನೂ ಓದಿ: ಮಿಚಾಂಗ್ ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ರಸ್ತೆಗಳು ಜಲಾವೃತ, ಶಾಲೆಗಳಿಗೆ ರಜೆ, ರೈಲು-ವಿಮಾನ ಸಂಚಾರ ಸ್ಥಗಿತ
ಚೆಂಗಲುಟ್ಟುವಿನಲ್ಲಿ ಇಬ್ಬರು ಸೇರಿದಂತೆ ಮಳೆ ಸಂಬಂಧಿ ಅವಘಡದಿಂದ ಚೆನ್ನೈನಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಚೆನ್ನೈನ ವಿಮಾನ ನಿಲ್ದಾಣ ಸೇರಿದಂತೆ ಬಹುತೇಕ ಭಾಗಗಳು ಜಲಾವೃತವಾಗಿವೆ. ರೈಲು-ವಿಮಾನ ಸಂಚಾರ ಸಹ ಸ್ಥಗಿತಗೊಂಡಿದೆ.
ಮಿಚಾಂಗ್ ಚಂಡಮಾರುತದ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿಸೆಂಬರ್ 5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.
ರಾಜಧಾನಿ ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ ಜಿಲ್ಲಾಡಳಿತಗಳು ಇಂದು (ಸೋಮವಾರ) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


