ಡಿ.17 ಕ್ಕೆ INDIA ಮೈತ್ರಿಕೂಟದ ಸಭೆ ನಿಗದಿ, 2024 ರ ಚುನಾವಣೆಗೆ ಕಾರ್ಯತಂತ್ರದ ಚರ್ಚೆ: ಆರ್ ಜೆಡಿ ನಾಯಕ ಲಾಲು
ವಿಪಕ್ಷಗಳ ಮೈತ್ರಿಕೂಟ INDIA ಸಭೆ ಡಿ.17 ರಂದು ನಡೆಯಲಿರುವುದಾಗಿ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸ್ಪಷ್ಟಪಡಿಸಿದ್ದಾರೆ.

ಪಾಟ್ನ: ವಿಪಕ್ಷಗಳ ಮೈತ್ರಿಕೂಟ INDIA ಸಭೆ ಡಿ.17 ರಂದು ನಡೆಯಲಿರುವುದಾಗಿ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸ್ಪಷ್ಟಪಡಿಸಿದ್ದಾರೆ.
2024 ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚಿಸಲು ಡಿ.06 ರಂದು ಸಭೆ ನಡೆಯಬೇಕಿತ್ತು.
ಆದರೆ ಡಿ.06 ರಂದು ಮಮತಾ ಬ್ಯಾನರ್ಜಿ, ನಿತೀಶ್ ಸೇರಿದಂತೆ ಹಲವು ಪ್ರಮುಖ ನಾಯಕರ ಅಲಭ್ಯತೆಯ ಕಾರಣದಿಂದ ಸಭೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಲಾಲು ಪ್ರಸಾದ್ ಯಾದವ್, ಸಭೆಯನ್ನು ಡಿ.17 ಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಮುಖ ನಾಯಕರ ಗೈರು ಸಾಧ್ಯತೆ: INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್
ಇನ್ನು ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆಯೂ ಲಾಲು ಪ್ರಸಾದ್ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ದುರ್ಬಲವಾಗಿಲ್ಲ. ಆದರೆ ರಾಜ್ಯಗಳಲ್ಲಿನ ಸ್ಥಳೀಯ ನಾಯಕತ್ವದ ದುರ್ಬಲತೆಯಿಂದಾಗಿ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಸೋತಿದೆ. ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಸ್ಥಳೀಯ ನಾಯಕತ್ವದೆಡೆಗೆ ಕಾಂಗ್ರೆಸ್ ಹೆಚ್ಚಿನ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


