ಜೈಪುರ: ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೆ ಗುಂಡಿಕ್ಕಿ ಹತ್ಯೆ; ಭಯಾನಕ ವಿಡಿಯೋ ವೈರಲ್
ರಾಜಸ್ಥಾನದ ಜೈಪುರದಲ್ಲಿ ಹಾಡಹಗಲೇ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಹಾಡಹಗಲೇ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಇಂದು ಮಧ್ಯಾಹ್ನ ಶ್ಯಾಮನಗರದಲ್ಲಿರುವ ಸುಖದೇವ್ ಸಿಂಗ್ ಅವರ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.
ಈ ಗುಂಡಿನ ದಾಳಿಯಲ್ಲಿ ಸುಖದೇವ್ ಸಿಂಗ್ ಅವರಿಗೆ ಎರಡು ಗುಂಡುಗಳು ತಗುಲಿದ್ದವು. ತಕ್ಷಣ ಅವರನ್ನು ಮಾನಸ ಸರೋವರದಲ್ಲಿರುವ ಮೆಟ್ರೋ ಮಾಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಸುಖದೇವ್ ಸಿಂಗ್ ಅವರ ಇಬ್ಬರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


