ಮೆಹುಲ್ ಚೋಕ್ಸಿ ವಿರುದ್ಧದ ವಂಚನೆ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ನಿಂದ ಮರು ಜೀವ!
ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ವಂಚನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ.

ನವದೆಹಲಿ: ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ವಂಚನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ.
2017 ರಲ್ಲಿ ಗುಜರಾತ್ ಹೈಕೋರ್ಟ್ ಚೋಕ್ಸಿ ವಿರುದ್ಧ ಗುಜರಾತ್ ಪೊಲೀಸರು ದಾಖಲಿಸಿದ್ದ ಎಫ್ಐಆರ್ ನ್ನು ರದ್ದುಗೊಳಿಸಿತ್ತು.
2015ರಲ್ಲಿ ಗುಜರಾತ್ನಲ್ಲಿ ದೂರುದಾರ ದಿಗ್ವಿಜಯ್ಸಿಂಗ್ ಹಿಮ್ಮತ್ಸಿನ್ಹ ಜಡೇಜಾ ದಾಖಲಿಸಿರುವ ಎಫ್ಐಆರ್ನ ಪ್ರಕಾರ, ಚೋಕ್ಸಿ ಮತ್ತು ಅವರ ಪತ್ನಿ 30 ಕೋಟಿ ರೂಪಾಯಿ ಮೌಲ್ಯದ 24 ಕ್ಯಾರೆಟ್ ಶುದ್ಧ ಚಿನ್ನದ ತುಂಡುಗಳನ್ನು ಒಳಗೊಂಡ ವ್ಯಾಪಾರ ವಹಿವಾಟಿಗೆ ಸಂಬಂಧಿಸಿದಂತೆ ನಕಲಿ ಮತ್ತು ವಂಚನೆ ಆರೋಪದ ಮೇಲೆ ಆರೋಪಿಯಾಗಿದ್ದಾರೆ.
ಚೋಕ್ಸಿ ವಿರುದ್ಧದ ಎಫ್ಐಆರ್ ನ್ನು ಮೇ 5, 2017 ರ ಹೈ ಕೋರ್ಟ್ ರದ್ದುಗೊಳಿಸಿತ್ತು. ಆದರೆ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ಚೋಕ್ಸಿ ವಿರುದ್ಧ ತನಿಖೆಯನ್ನು ಮುಂದುವರಿಸಲು ಪೊಲೀಸರನ್ನು ಕೇಳಿದೆ.
ಆಕ್ಷೇಪಾರ್ಹ ತೀರ್ಪು ಅಥವಾ ಪ್ರಸ್ತುತ ಆದೇಶದಲ್ಲಿ ಮಾಡಲಾದ ಯಾವುದೇ ಅಂಶಗಳ ಪ್ರಭಾವವಿಲ್ಲದೆ, ತನಿಖೆ ಮುಂದುವರೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


