ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ: ಪ್ರಧಾನಿ ಮೋದಿ ಶುಭಾಶಯ
ತೆಲಂಗಾಣ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಎ. ರೇವಂತ್ ರೆಡ್ಡಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ತೆಲಂಗಾಣ ರಾಜ್ಯದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರ ಸರ್ಕಾರ ನೀಡುತ್ತದೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ಎ. ರೇವಂತ್ ರೆಡ್ಡಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ತೆಲಂಗಾಣ ರಾಜ್ಯದ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರ ಸರ್ಕಾರ ನೀಡುತ್ತದೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.
ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಕಾಂಗ್ರೆಸ್‌ನ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಎಲ್ ಬಿ ಸ್ಟೇಡಿಯಂನಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ರೇವಂತ್ ರೆಡ್ಡಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಟ್ವಿಟ್ಟರ್ ನಲ್ಲಿ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ಮೋದಿ, ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ರೇವಂತ್ ರೆಡ್ಡಿ ಅವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ಅಲ್ಲಿನ ನಾಗರಿಕರ ಕಲ್ಯಾಣಕ್ಕಾಗಿ ನಾನು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


