ಪುಣೆ ಬಳಿಯ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ
ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿರುವ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು...

ಪುಣೆ: ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಪ್ರದೇಶದಲ್ಲಿರುವ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 2.45 ರ ಸುಮಾರಿಗೆ ತಲವಾಡೆಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪುರಸಭೆಯ ಆಯುಕ್ತ ಶೇಖರ್ ಸಿಂಗ್ ಅವರು ತಿಳಿಸಿದ್ದಾರೆ.
ಕಾರ್ಖಾನೆಯು ಸ್ಪಾರ್ಕ್ಲಿಂಗ್ ಕ್ಯಾಂಡಲ್ ಗಳನ್ನು ತಯಾರಿಸುತ್ತದೆ. ಈ ಕ್ಯಾಂಡಲ್ ಗಳನ್ನು ಸಾಮಾನ್ಯವಾಗಿ ಹುಟ್ಟುಹಬ್ಬದ ಆಚರಣೆಗೆ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
"ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ. ಆದರೆ ಅಗ್ನಿ ಅವಘಡಕ್ಕೆ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಶೇಖರ್ ಸಿಂಗ್ ಅವರು ತಿಳಿಸಿದ್ದಾರೆ.
ಗಾಯಾಳುಗಳನ್ನು ಪುಣೆ ಮತ್ತು ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


