ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಶುಕ್ರವಾರದಂದು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಹೈದರಾಬಾದ್: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಶುಕ್ರವಾರದಂದು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಲೋಕಸಭಾ ಸ್ಪೀಕರ್ ಓಮ್ ಬಿರ್ಲಾ ಗೆ ರೆಡ್ಡಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರೇವಂತ್ ರೆಡ್ಡಿ ಲೋಕಸಭೆಯಲ್ಲಿ ಮಲ್ಕಜ್ಗಿರಿ ಸಂಸತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ರೆಡ್ಡಿ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊಡಂಗಲ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ರೆಡ್ಡಿ ಅವರು ಉಪಮುಖ್ಯಮಂತ್ರಿ ಮತ್ತು ಇತರ ಸಚಿವರೊಂದಿಗೆ ಗುರುವಾರ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಉನ್ನತ ನಾಯಕರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


