ದೇಶ

ತೆಲಂಗಾಣ ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್‌ ಒವೈಸಿ: ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ

ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರು ಇಂದು (ಶನಿವಾರ) ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ತೆಲಂಗಾಣ ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್‌ ಒವೈಸಿ: ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ
ಅಕ್ಬರುದ್ದೀನ್‌ ಒವೈಸಿ
Published On :

ಹೈದರಾಬಾದ್: ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರು ಇಂದು (ಶನಿವಾರ) ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರ ಅಧ್ಯಕ್ಷತೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಬಿಜೆಪಿ ಶಾಸಕರು ನಿರಾಕರಿಸಿದ್ದು, ಸದನದಿಂದ ಹೊರನಡೆದಿದ್ದಾರೆ. ನಾವು ತೆಲಂಗಾಣದಲ್ಲಿ 8 ಸ್ಥಾನಗಳನ್ನು ಗೆದ್ದಿದ್ದೇವೆ.

ಹಿರಿಯ ನಾಯಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವುದು ಸಂಪ್ರದಾಯ. ಆದರೆ, ಎಐಎಂಐಎಂ ಜೊತೆಗಿನ ಹೊಂದಾಣಿಕೆಯಿಂದಾಗಿ ಕಾಂಗ್ರೆಸ್ ಅಕ್ಬರುದ್ದೀನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದೆ. ಇದಕ್ಕೆ ನಾವು ಆಕ್ಷೇಪಿಸುತ್ತೇವೆ. ಈ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡುತ್ತೇವೆ’ ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹೇಳಿದ್ದಾರೆ.

ಕಳೆದ ತಿಂಗಳ ವಿಧಾನಸಭಾ ಚುನಾವಣೆಯಲ್ಲಿ ಗೋಶಾಮಹಲ್‌ನಿಂದ ಗೆದ್ದಿದ್ದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಎಐಎಂಐಎಂ ಮುಂದೆ "ಜೀವಂತ ಇರುವವರೆಗೂ" ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಪೂರ್ಣಾವಧಿ ಸ್ಪೀಕರ್ ನೇಮಕವಾದ ಬಳಿಕವಷ್ಟೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.