ದೇಶ

ಹೈದರಾಬಾದ್: ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಮೂಳೆ ಮುರಿತದಿಂದ ಬಳಲುತ್ತಿದ್ದ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಯಶೋಧ ಹಾಸ್ಪಿಟಲ್ಸ್‌ನ ವೈದ್ಯರು ಯಶಸ್ವಿ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಹೈದರಾಬಾದ್: ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ
ಕೆಸಿ ಚಂದ್ರಶೇಖರ್ ರಾವ್
Published On :

ಹೈದರಾಬಾದ್: ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಮೂಳೆ ಮುರಿತದಿಂದ ಬಳಲುತ್ತಿದ್ದ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಯಶೋಧ ಹಾಸ್ಪಿಟಲ್ಸ್‌ನ ವೈದ್ಯರು ಯಶಸ್ವಿ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

69 ವರ್ಷದ ಕೆಸಿಆರ್‌ ಅವರು ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು. ಕೆಸಿಆರ್‌ ಅವರಿಗೆ ತೊಡೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಮಾಡಬೇಕಾಗಿದ್ದು, ಚೇತರಿಸಿಕೊಳ್ಳಲು ಆರರಿಂದ ಎಂಟು ವಾರ ಬೇಕಾಗುತ್ತದೆ. ಕೆಸಿಆರ್‌ ಅವರ ಮೇಲ್ವಿಚಾರಣೆಯನ್ನು ವೈದ್ಯರ ತಂಡವೊಂದು ನಿರಂತರವಾಗಿ ಮಾಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ’ ಎಂದು ವೈದ್ಯರು ತಿಳಿಸಿದ್ದರು.

ಈ ಕುರಿತು ಕೆಸಿಆರ್‌ ಅವರ ಪುತ್ರ ಕೆ.ಟಿ. ರಾಮರಾವ್‌ ಅವರೂ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದು, ‘ಕೆಸಿಆರ್‌ ಅವರು ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದಿದ್ದಾರೆ. ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಈಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗೆದ್ದುಗೆ ಏರಿತ್ತು. ಇತ್ತ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್‌ಎಸ್‌) 39 ಸ್ಥಾನಗಳಲ್ಲಿ ಮಾತ್ರ ಗೆದ್ದು ಹಿನ್ನಡೆ ಅನುಭವಿಸಿತ್ತು. ಇತ್ತ ಬಿಜೆಪಿ 8, ಎಐಎಂಐಎಂ 7 ಹಾಗೂ ಪಕ್ಷೇತರರು 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಗುರುವಾರ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.