ರಾಜಸ್ಥಾನ ಸಿಎಂ ಆಯ್ಕೆ ಕಗ್ಗಂಟು: ವಸುಂಧರಾ ರಾಜೆಯನ್ನು ಭೇಟಿ ಮಾಡಿದ 10 ಶಾಸಕರು
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು ಒಂದು ವಾರ ಕಳೆದಿದ್ದು, ಬಿಜೆಪಿ ಇಂದು ಛತ್ತೀಸ್ ಗಢ ಸಿಎಂ ಆಯ್ಕೆ ಮಾಡಿದೆ. ಆದರೆ ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿದೆ.

ಜೈಪುರ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು ಒಂದು ವಾರ ಕಳೆದಿದ್ದು, ಬಿಜೆಪಿ ಇಂದು ಛತ್ತೀಸ್ ಗಢ ಸಿಎಂ ಆಯ್ಕೆ ಮಾಡಿದೆ. ಆದರೆ ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿದೆ.
ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಅವರ ಹೆಸರು ಸಿಎಂ ಹುದ್ದೆಗೆ ಮುಂಚೂಣಿಯಲ್ಲಿದೆ. ಈ ನಡುವೆ 10 ಶಾಸಕರು ವಸುಂಧರಾ ರಾಜೆ ಅವರನ್ನು ಭೇಟಿ ಮಾಡಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಸಭೆಯನ್ನು ಇನ್ನಷ್ಟೇ ನಡೆಸಬೇಕಿದ್ದು, ಸಭೆಯಲ್ಲಿ ಸಿಎಂ ಆಯ್ಕೆ ನಡೆಯಲಿದೆ.
ಅಜಯ್ ಸಿಂಗ್, ಬಾಬು ಸಿಂಗ್ ಸೇರಿದಂತೆ ಹಲವರು ರಾಜೆ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ವಸುಂಧರಾ ರಾಜೆ ಈಗಾಗಲೇ 2 ಬಾರಿ ರಾಜಸ್ಥಾನ ಸಿಎಂ ಆಗಿದ್ದಾರೆ.
ರಾಜಸ್ಥಾನ ಬಿಜೆಪಿ ಶಾಸಕರು- ವಸುಂಧರಾ ರಾಜೆ ಭೇಟಿಯನ್ನು ಶಕ್ತಿ ಪ್ರದರ್ಶನದ ಭಾಗವೆಂದೇ ವಿಶ್ಲೇಷಿಸಲಾಗುತ್ತಿದೆ. ವಸುಂಧರಾ ರಾಜೆ ಇತ್ತೀಚೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಸಿಎಂ ಆಯ್ಕೆ ಸಂಬಂಧ ರಾಜಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಈಗಾಗಲೇ ವೀಕ್ಷಕರನ್ನು ಕಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


