ಡಿ.13ರಂದು ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣವಚನ
ಭಾರತೀಯ ಜನತಾ ಪಕ್ಷದ ನಾಯಕ ವಿಷ್ಣು ದೇವ್ ಸಾಯಿ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಡಿಸೆಂಬರ್ 13 ರಂದು ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಯ್‌ಪುರ: ಭಾರತೀಯ ಜನತಾ ಪಕ್ಷದ ನಾಯಕ ವಿಷ್ಣು ದೇವ್ ಸಾಯಿ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಡಿಸೆಂಬರ್ 13 ರಂದು ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ವಿಷ್ಣು ದೇವ್ ಸಾಯಿ ಅವರು ಬುಧವಾರ ರಾಯ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಿಜೆಪಿಯ ಮೊದಲ ಬುಡಕಟ್ಟು ಸಿಎಂ ಆಗಲಿರುವ ಸಾಯಿ(59) ಜೊತೆಗೆ ಅವರ ಮಂತ್ರಿಮಂಡಲವೂ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಸಾಂವಿಧಾನಿಕ ನಿಯಮಗಳ ಪ್ರಕಾರ, 90 ಸದಸ್ಯ ಬಲ ಹೊಂದಿರುವ ಛತ್ತೀಸ್‌ಗಢದಲ್ಲಿ, ಸಿಎಂ ಸೇರಿದಂತೆ ಗರಿಷ್ಠ 13 ಸಚಿವರನ್ನು ಹೊಂದಬಹುದು.
ರಾಜ್ಯ ರಾಜಧಾನಿಯ ವಿಜ್ಞಾನ ಕಾಲೇಜು ಮೈದಾನದಲ್ಲಿ ಡಿಸೆಂಬರ್ 13 ರಂದು ಮಧ್ಯಾಹ್ನ 2 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ರಾಜ್ಯ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.
ಸಮಾರಂಭದಲ್ಲಿ ಮೋದಿಯವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ, ಪಕ್ಷದ ಛತ್ತೀಸ್‌ಗಢ ಉಸ್ತುವಾರಿ ಓಂ ಮಾಥುರ್ ಮತ್ತು ಇತರ ಕೆಲವು ರಾಜ್ಯಗಳ ಸಿಎಂಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


