NCF ಆಧಾರದ ಮೇಲೆ ರಾಜ್ಯಗಳು ತಮ್ಮದೇ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಬಹುದು: ಕೇಂದ್ರ
ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಬಹುದು ಅಥವಾ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ (ಎನ್‌ಸಿಎಫ್) ಆಧಾರದ ಮೇಲೆ ತಮ್ಮದೇ ಆದ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ನವದೆಹಲಿ: ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಬಹುದು ಅಥವಾ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ (ಎನ್‌ಸಿಎಫ್) ಆಧಾರದ ಮೇಲೆ ತಮ್ಮದೇ ಆದ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.
ಈ ಕುರಿತು ಇಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದ ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ಅವರು, ಎನ್‌ಸಿಎಫ್ ಸೂಚನೆ ನೀಡುವ ದಾಖಲೆಯಲ್ಲ. ಇದು ಸಲಹೆ ಅಥವಾ ಶಿಫಾರಸು ಮಾಡುತ್ತದೆ ಎಂದು ಹೇಳಿದರು.
ಎನ್‌ಸಿಇಆರ್‌ಟಿಯ ರಾಷ್ಟ್ರೀಯ ಪಠ್ಯಕ್ರಮವನ್ನು ತಿರಸ್ಕರಿಸಿದ ಮತ್ತು ರಾಜ್ಯಗಳು ತಮ್ಮದೇ ಪಠ್ಯಕ್ರಮವನ್ನು ಸಿದ್ಧಪಡಿಸಿದ ಕುರಿತು ತಮಿಳುನಾಡು ಸಂಸದರಾದ ಎ ರಾಜಾ ಮತ್ತು ಎ ಗಣೇಶಮೂರ್ತಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ, ಎನ್‌ಸಿಎಫ್ ಶಾಲಾ ಶಿಕ್ಷಣದ ಫೆಡರಲ್ ರಚನೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಹೇಳಿದರು.
ರಾಜ್ಯಗಳು ಅಂತಿಮವಾಗಿ ತಮ್ಮ ರಾಜ್ಯ ಅಥವಾ ಪ್ರಾದೇಶಿಕ ಪಠ್ಯಕ್ರಮವನ್ನು ಹೊಂದುತ್ತವೆ ಮತ್ತು ಸುಲಭವಾಗಿ ಸ್ಥಳೀಯ ಅಂಶಗಳನ್ನು ಸೇರಿಸುತ್ತವೆ ಎಂದು ಕೇಂದ್ರ ಸಚಿವೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


