ಡಿಸೆಂಬರ್ 13 ರಂದು ಮಧ್ಯ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಅವರು ಡಿಸೆಂಬರ್ 13 ರಂದು ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಭೋಪಾಲ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಮೋಹನ್ ಯಾದವ್ ಅವರು ಡಿಸೆಂಬರ್ 13 ರಂದು ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬುಧವಾರ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಸೋಮವಾರ ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹೇಳಿದ್ದಾರೆ.
ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಸಂಜೆ ಯಾದವ್ ಅವರು ರಾಜಭವನಕ್ಕೆ ತೆರಳಿ, ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರನ್ನು ಭೇಟಿ ಮಾಡಿ, ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಾದವ್ ಅವರು, ಡಿಸೆಂಬರ್ 13 ರಂದು ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ನಿರ್ಗಮಿತ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಪಕ್ಷದ ರಾಜ್ಯ ಮುಖ್ಯಸ್ಥ ವಿಡಿ ಶರ್ಮಾ ಮತ್ತು ಮೂವರು ಕೇಂದ್ರ ವೀಕ್ಷಕರು ಸಹ ರಾಜಭವನಕ್ಕೆ ತೆರಳಿದ್ದರು ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


