ಪ್ರಧಾನಿ ಮೋದಿ ಕ್ಷೇತ್ರ ವಾರಣಾಸಿಯಿಂದ ಲೋಕಸಭೆ ಚುನಾವಣಾ ಪ್ರಚಾರಕ್ಕೆ ನಿತೀಶ್ ಕುಮಾರ್ ಚಾಲನೆ
ಬಿಹಾರ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಜನಬೆಂಬಲ ಪಡೆಯಲು...

ಪಾಟ್ನಾ: ಬಿಹಾರ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಜನಬೆಂಬಲ ಪಡೆಯಲು ದೇಶದ ವಿವಿಧ ರಾಜ್ಯಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ನಿತೀಶ್ ಕುಮಾರ್ ಅವರು ಇದೇ ಡಿಸೆಂಬರ್ 24 ರಂದು ಪ್ರಧಾನಿ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ನಂತರ ತಮ್ಮ ಪ್ರಚಾರದ ಭಾಗವಾಗಿ ಮಹಾರಾಷ್ಟ್ರ, ಹರಿಯಾಣ, ರಾಜಸ್ಥಾನ, ಜಾರ್ಖಂಡ್ ಮತ್ತು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.
ಮುಂದಿನ ವರ್ಷ ಜನವರಿ 21 ರಂದು ನೆರೆಯ ಜಾರ್ಖಂಡ್‌ನ ರಾಮಗಢದಲ್ಲಿ ಬಿಹಾರ ಸಿಎಂ, ಸಾರ್ವಜನಿಕ ರ್ಯಾಲಿ ‘ನಿತೀಶ್ ಜೋಹರ್’ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸೋಮವಾರ, ನಿತೀಶ್ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿ ಮುಂಬರುವ ಲೋಕಸಭೆ ಚುನಾವಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದರು.
ನಿತೀಶ್ ಅವರ ಪ್ರಚಾರ ಕಾರ್ಯಕ್ರಮಗಳು ಪ್ರತಿಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ. ಆದರೆ ಅವರ ಸಾರ್ವಜನಿಕ ಸಭೆಗಳು ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಕಾರ್ಯಸೂಚಿಯನ್ನು ಹೊಂದಿವೆ ಎಂದು ಜೆಡಿ(ಯು) ರಾಷ್ಟ್ರೀಯ ಮುಖ್ಯ ವಕ್ತಾರ ಕೆ ಸಿ ತ್ಯಾಗಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


